ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ ವತಿಯಿಂದ ರಾಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗದ 2022-23ನೇ ಸಾಲಿನ ಪ್ರಥಮ ಸೆಮಿಸ್ಟರ್ ಪರೀಕ್ಷೆಯಲ್ಲಿ ಸಹ್ಯಾದ್ರಿ ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೆ ಕನಿಷ್ಠ ಅರ್ಹತಾ ಅಂಕಗಳಿಗಿಂತ ಕಡಿಮೆ ಅಂಕಗಳನ್ನು ನೀಡಲಾಗಿದ್ದು, ಕೂಡಲೇ ಮರು ಮೌಲ್ಯಮಾಪನ ಮಾಡಬೇಕೆಂದು ಒತ್ತಾಯಿಸಿದರು.ಸಹ್ಯಾದ್ರಿ ಕಾಲೇಜಿನ ಸ್ನಾತಕೋತ್ತರ ರಾಜ್ಯಶಾಸ್ತ್ರ ವಿಭಾಗದಲ್ಲಿ 24 ವಿದ್ಯಾರ್ಥಿಗಳು ಭದ್ರಾವತಿ ,ಹಾಗೂ ಕಡೂರು ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿಗಳಿಗೂ ಅನ್ಯಾಯವಾಗಿದೆ ಎಂದರು.
ಶೇ.59ಕ್ಕಿಂತ ಕಡಿಮೆ ಅಂಕಗಳನ್ನು ನೀಡಲಾಗಿದೆ ಇವರಲ್ಲಿ ಸುಮಾರು ವಿದ್ಯಾರ್ಥಿಗಳಿಗೆ ಶೇ.55 ಕ್ಕಿಂತ ಕಡಿಮೆ ಅಂಕ ನೀಡಲಾಗಿದೆ ಇದರಿಂದ NET ಮತ್ತು SELT ಗಳನ್ನು ಬರೆಯಲು ಶೇ.55ಕ್ಕಿಂತ ಹೆಚ್ಚು ಅಂಕಗಳನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ. ಆದರೆ, ಇಂತಹ ಪರೀಕ್ಷೆಗಳನ್ನು ಬರೆಯಲು ಬೇಕಾದ ಕನಿಷ್ಠ ಶೇ.55ಕ್ಕಿಂತ ಕಡಿಮೆ ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳು ಇವುಗಳಿಂದ ವಂಚಿತರಾಗುತ್ತಾರೆ. ಇವರಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಗ್ರಾಮೀಣ, ಬಡ, ಹಿಂದುಳಿದ ಹಾಗೂ ಪರಿಶಿಷ್ಟ ಜಾತಿ-ವರ್ಗಗಳಿಗೆ ಸೇರಿದವರಾಗಿದ್ದು, ಕನಿಷ್ಠ ಅರ್ಹತೆಯ ಅಂಕಗಳಿಗಿಂತ ಕಡಿಮೆ ಅಂಕಗಳು ಬಂದಿರುವುದರಿಂದ ಭವಿಷ್ಯದಲ್ಲಿ ಉದ್ಯೋಗಗಳ ಅವಕಾಶಗಳಿಂದ ವಂಚಿತರಾಗಲಿದ್ದಾರೆಂಬ ಆತಂಕಕ್ಕೊಳಗಾಗಿದ್ದಾರೆ.
ಕಾಲೇಜಿನ ರಾಜ್ಯಶಾಸ್ತ್ರ ಸ್ನಾತಕೋತ್ತರ ಅಧ್ಯಯನ ವಿಭಾಗದ ಎಲ್ಲ ವಿದ್ಯಾರ್ಥಿಗಳಿಗೂ ಶೇ.59ಕ್ಕಿಂತ ಕಡಿಮೆ ಮತ್ತು ಕನಿಷ್ಠ ಅರ್ಹತೆಗೆ ಬೇಕಾದ ಶೇ.55ಕ್ಕಿಂತ ಕಡಿಮೆ ಅಂಕಗಳು ಬಂದಿರುವುದರಿಂದ ಮೌಲ್ಯಮಾಪನದಲ್ಲಿ ಲೋಪ ಆಗಿದೆ ಎನ್ನುವಂತಾಗಿದೆ. ಆದ್ದರಿಂದ ಮಾನ್ಯ ಕುಲಪತಿಗಳು ಕೂಡಲೇ ಈ ವಿಭಾಗದ ಎಲ್ಲ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಮರುಮೌಲ್ಯಮಾಪನ ಮಾಡಿಸುವ ಮೂಲಕ ಉತ್ತಮ ಅಂಕಗಳನ್ನು ಕೊಡಿಸಬೇಕಾಗಿ ಈ ಮೂಲಕ ವಿನಂತಿಸುತ್ತಿದ್ದೇವೆ.
ಹಾಗೆಯೇ ಸಹ್ಯಾದ್ರಿ ಕಲಾ ಕಾಲೇಜಿನ ಸ್ನಾತಕೋತ್ತರ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಸಂಶೋಧನಾ ಕೇಂದ್ರದಲ್ಲಿ ಪಿಹೆಚ್‍ಡಿ ಸಂಶೋಧನೆ ಕೈಗೊಂಡಿರುವ ಎಲ್ಲ ವಿದ್ಯಾರ್ಥಿಗಳಿಗೆ ಪಿಹೆಚ್‍ಡಿ ಕೋರ್ಸ್ ವರ್ಕ್ ಪರೀಕ್ಷೆಯಲ್ಲಿ ಅನುತ್ತೀರ್ಣಗೊಳಿಸಿ ತಾರತಮ್ಯವೆಸಗಿರುತ್ತಾರೆ. ಅವರ ಕೋರ್ಸ್ ವರ್ಕ್ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನೂ ಮೌಲ್ಯಮಾಪನ ಮಾಡಿಸುವ ಮೂಲಕ ಈ ವಿದ್ಯಾರ್ಥಿಗಳಿಗೂ ನ್ಯಾಯ ಒದಗಿಸಿಕೊಡಬೇಕೆಂದು ಕುಲಪತಿಗಳಾದ ವೀರಭದ್ರಪ್ಪನವರಿಗೆ ಮನವಿ ಸಲ್ಲಿಸಲಾಯಿತು
ಮುಂದಿನ ದಿನಗಳಲ್ಲಿ ಈ ರೀತಿ ವಿದ್ಯಾರ್ಥಿಗಳಿಗೆ ತಾರತಮ್ಯ ಎಸಗುವ ಮೂಲಕ ಅನ್ಯಾಯವಾಗದಂತೆ ನೋಡಿಕೊಳ್ಳಬೇಕೆಂದು ವಿನಂತಿಸಿಕೊಂಡರು.
ಈ ಸಂದರ್ಭದಲ್ಲಿ ಎನ್ ಎಸ್ ಯುಐ ಜಿಲ್ಲಾಧ್ಯಕ್ಷ ವಿಜಯ್ ,ಕಾರ್ಯಾಧ್ಯಕ್ಷ ರವಿ ಕಾಟಿ ಕೆರೆ ,ಯುವ ಮುಖಂಡರಾದ ಮುರುಗೇಶ್ ,ಭದ್ರಾವತಿ ತಾಲ್ಲೂಕು ಅಧ್ಯಕ್ಷ ಭಾಷಾ ,ಶಿವಮೊಗ್ಗ ಗ್ರಾಮಾಂತರ ಅಧ್ಯಕ್ಷ ರಾದ ಹರ್ಷಿತ್, ನಗರಾಧ್ಯಕ್ಷರಾದ ಚರಣ್ , ರವಿ ,ಕೀರ್ತಿ ಗೋಣಿಬೀಡು,ಗಂಗಾಧರ ಧವನ್,ಹೇಮಂತ್ ಉಪಸ್ಥಿದ್ದರು.