ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆ ವತಿಯಿಂದ ಆ. 7 ರಂದು ಮೀಡಿಯಾ ಹೌಸ್ ಗೆ ಚಾಲನೆ ನೀಡಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ಕೆ.ವಿ. ಶಿವಕುಮಾರ್ ಹೇಳಿದರು.

ಅವರು ಇಂದು ಮೀಡಿಯಾ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೀಡಿಯಾ ಹೌಸ್ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆಸುವ ಪತ್ರಿಕಾಗೋಷ್ಠಿಗಳು, ಸಂವಾದ, ಕಿರು ಕಾರ್ಯಕ್ರಮಗಳ ವೇದಿಕೆಯಾಗಿದೆ. ಇದರ ಅಧಿಕೃತ ಉದ್ಘಾಟನೆ ಆ. 7 ರಂದು ಬೆಳಗ್ಗೆ 9.30 ಕ್ಕೆ ಲೋಕಾರ್ಪಣೆಗೊಳ್ಳಲಿದೆ ಎಂದರು.ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಮೀಡಿಯಾ ಹೌಸ್ ಉದ್ಘಾಟಿಸಲಿದ್ದಾರೆ. ಸಂಸದ ಬಿ.ವೈ. ರಾಘವೇಂದ್ರ ದೀಪ ಬೆಳಗಿಸುವರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ಭಾಗವಹಿಸಲಿದ್ದು, ಇದೇ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕಾರ್ಯದರ್ಶಿ ಸೋಮಶೇಖರ್ ಕರಗೋಡು ಅವರನ್ನು ಸನ್ಮಾನಿಸಲಾಗುವುದು ಎಂದರು.ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಎನ್. ರವಿಕುಮಾರ್, ವಿಶೇಷ ಆಹ್ವಾನಿತರಾದ ಜಿ. ಪದ್ಮನಾಭ್, ರಾಷ್ಟ್ರೀಯ ಮಂಡಳಿ ಸದಸ್ಯ ಭಂಡಿಗಡಿ ನಂಜುಂಡಪ್ಪ ಉಪಸ್ಥಿತರಿರುವರು ಎಂದರು.

ಜಿಲ್ಲಾ ಉಪಾಧ್ಯಕ್ಷ ವೈದ್ಯ ಮಾತನಾಡಿ, ಮೀಡಿಯಾ ಹೌಸ್ ನಲ್ಲಿ ಪತ್ರಿಕಾಗೋಷ್ಠಿಗಳಲ್ಲದೇ, ಸಂವಾದ, ಕಿರು ಕಾರ್ಯಕ್ರಮಗಳಿಗೂ ಅವಕಾಶ ನೀಡಲಾಗುವುದು. ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳು ಇದರ ಅವಕಾಶ ಸದುಪಯೋಗಪಡಿಸಿಕೊಳ್ಳಬೇಕು. ಹೆಚ್ಚಿನ ವಿವರಗಳಿಗೆ ವಿ.ಟಿ. ಅರುಣ್(91416 30025), ಕೆ.ಆರ್. ಸೋಮನಾಥ್(94486 28133), ನಾಗರಾಜ್ ಶೆಣೈ(94493 40316), ವೈದ್ಯ(98444 56505) ಸಂಪರ್ಕಿಸುವಂತೆ ಕೋರಿದರು.ಪತ್ರಿಕಾಗೋಷ್ಠಿಯಲ್ಲಿ ಸಂಘದ ಜಿಲ್ಲಾ ಉಪಾಧ್ಯಕ್ಷ ಆರ್.ಎಸ್. ಹಾಲಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಟಿ. ಅರುಣ್, ರಾಜ್ಯ ಸಮಿತಿ ನಿರ್ದೇಶಕ ಎನ್. ರವಿಕುಮಾರ್, ನಗರ ಕಾರ್ಯದರ್ಶಿ ಕೆ.ಆರ್. ಸೋಮನಾಥ್ ಇದ್ದರು.

ವರದಿ ಮಂಜುನಾಥ್ ಶೆಟ್ಟಿ…