ನವದೆಹಲಿ : ಉಪರಾಷ್ಟ್ರಪತಿ ಚುನಾವಣಾ ಅಂಗವಾಗಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮತ ಚಲಾಯಿಸಿದರು.ಜೊತೆಗೆ ಮತದಾನದ ಪ್ರಕ್ರಿಯೆಯಲ್ಲಿ ಶಿವಮೊಗ್ಗ ಲೋಕಸಭಾ ಸಂಸದರಾದ ಶ್ರೀ ಬಿ ವೈ ರಾಘವೇಂದ್ರ ರವರು ಭಾಗವಹಿಸಿ, ತಮ್ಮ ಅಮೂಲ್ಯ ಮತವನ್ನು ಚಲಾಯಿಸಿದರು.
ಈ ಸಂದರ್ಭದಲ್ಲಿ ಕೇಂದ್ರದ ಸಂಸದೀಯ ವ್ಯವಹಾರ ಸಚಿವರಾದ ಪ್ರಹ್ಲಾದ ಜೋಷಿ ಅವರು ಇನ್ನಿತರ ಸಚಿವರು ಹಾಗೂ ಸಂಸದರು ಉಪಸ್ಥಿತರಿದ್ದರು.
ಜುಲೈ 27 ರಂದು NDA ಅಭ್ಯರ್ಥಿಯಾದ ಶ್ರೀ ಜಗದೀಪ ದಾನಕರ್ ರವರನ್ನು ಶಿವಮೊಗ್ಗ ಲೋಕಸಭಾ ಸದಸ್ಯರಾದ ಬಿ ವೈ ರಾಘವೇಂದ್ರರವರು ಭೇಟಿ ಮಾಡಿ ಶುಭ ಹಾರೈಸಿದ್ದರು.