ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ರವರು ಕುಂಸಿ ಗ್ರಾಮದ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ 2022-23 ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ, ಮತದಾರರ ಸಾಕ್ಷರತಾ ಸಂಘ, ಇಕೋ ಕ್ಲಬ್ ಮತ್ತಿತರ ಸಂಘಗಳ ಉದ್ಘಾಟನೆ ಮತ್ತು ದ್ವೀತಿಯ ಪಿ.ಯು.ಸಿ. ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಾಧಕರಿಗೆ ಪ್ರತಿಭಾ ಪುರಸ್ಕಾರ ಹಾಗೂ ವನಮಹೋತ್ಸವಾ ಉದ್ಘಾಟನಾ ಸಮಾರಂಭ ಕಾರ್ಯಕ್ರಮವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಅರುಣ್ ರವರು ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಸುರೇಶ್ ರವರು ಪ್ರಧಾನ ಕಾರ್ಯದರ್ಶಿ, ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳು, ಸಿ.ಡಿ.ಸಿ ಸದಸ್ಯರು ಗಳು, ಹಾಗೂ ಮುಖಂಡರು, ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…