ಶಿವಮೊಗ್ಗ: ಮಕ್ಕಳಲ್ಲಿ ಸೃಜನಶೀಲತೆ ಮತ್ತು ಕ್ರೀಯಾಶೀಲತೆ ಸುಪ್ತವಾಗಿದ್ದು, ಶಾಲಾ ಶಿಕ್ಷಕರು ಹಾಗೂ ಪೋಷಕರು ಮಕ್ಕಳಲ್ಲಿನ ಕ್ರೀಯಾಶೀಲತೆ ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಬೇಕು ಎಂದು ರೋಟರಿ ಶಿವಮೊಗ್ಗ ಪೂರ್ವ ಎಜುಕೇಷನ್ ಮತ್ತು ಚಾರಿಟೇಬಲ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಎಂ. ಚಂದ್ರಶೇಖರಯ್ಯ ಹೇಳಿದರು.
ಅಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ಶಿವಮೊಗ್ಗ ರೋಟರಿ ಶಿವಮೊಗ್ಗ ಪೂರ್ವ ಶಾಲೆಯಲ್ಲಿ ಶಾಲಾ ಮಟ್ಟದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು.
ಮೊಬೈಲ್, ಟ್ಯಾಬ್‌ನಂತಹ ಎಲೆಕ್ಟಾçನಿಕ್ಸ್ ಉಪಕರಣಗಳ ಬಳಕೆಯಲ್ಲಿ ಮಕ್ಕಳು ಹೆಚ್ಚು ತೊಡಗಿಸಿಕೊಳ್ಳುತ್ತಿರುವ ಕಾಲಘಟ್ಟದಲ್ಲಿ ಮಕ್ಕಳ ಮನಸ್ಸನ್ನು ರಚನಾತ್ಮಕ ದಿಕ್ಕಿನಲ್ಲಿ ಹರಿಯುವಂತೆ ಮಾಡಬೇಕಿದೆ. ವ್ಯಕ್ತಿತ್ವ ವಿಕಸನವಾಗಲು ಸಂಸ್ಕೃತಿ, ಸಾಹಿತ್ಯ ಹಾಗೂ ಕ್ರೀಡಾಸ್ಪರ್ಧೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡಬೇಕು ಎಂದು ತಿಳಿಸಿದರು.
ಅಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ದೇಶದ ಅಭಿವೃದ್ಧಿಗಾಗಿ, ದೀನದಲಿತರ ಹಾಗೂ ಬಡವರ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿದೆ. ದೇಶದ ಎಲ್ಲ ಕಡೆಗಳಲ್ಲೂ ತ್ರಿವರ್ಣ ಧ್ವಜ ಹಾರಿಸಿ ವಿಜಯೋತ್ಸವವನ್ನು ಸಂಭ್ರಮಿಸಬೇಕೆAದು ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿದ್ದಾರೆ ಎಂದರು.
ಸಾAಸ್ಕೃತಿಕ ಸ್ಪರ್ಧೆಯಲ್ಲಿ ಮಕ್ಕಳು ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಸುಭಾಷ್‌ಚಂದ್ರ ಬೋಸ್, ಭಗತ್‌ಸಿಂಗ್, ಸ್ವತಂತ್ರ ಸೇನಾನಿಗಳ ಪಾತ್ರದಲ್ಲಿ ಪಾಲ್ಗೊಂಡಿದ್ದರು. ಗೀತ ಗಾಯನ ಸ್ಪರ್ಧೆ, ದೇಶಭಕ್ತಿಗೀತೆ, ಭಾಷಣ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ರೋಟರಿ ಶಿವಮೊಗ್ಗ ಪೂರ್ವ ಎಜುಕೇಷನ್ ಮತ್ತು ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಡಾ. ಪರಮೇಶ್ವರ್ ಶಿಗ್ಗಾಂವ್, ಖಜಾಂಚಿ ಜಿ.ವಿಜಯ್‌ಕುಮಾರ್, ಪ್ರಾಚಾರ್ಯ ಸೂರ್ಯನಾರಾಯಣ, ಮುಖ್ಯಶಿಕ್ಷಕಿ ಜಯಶೀಲಾಬಾಯಿ ಹಾಗೂ ಎಲ್ಲ ಶಿಕ್ಷಕರು ಹಾಜರಿದ್ದರು.