ಶಿವಮೊಗ್ಗದಲ್ಲಿ ಕಳೆದ ನಾಲೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಅಪಾರ ಪ್ರಮಾಣದ ಹಾನಿಯಾಗಿದ್ದು ನಗರದ ಶೇಷಾದ್ರಿಪುರಂನ 2ನೇ ತಿರುವಿನಲ್ಲಿ ಹಲವು ಮನೆಗಳು ಕುಸಿದಿವೆ. ಈ ಸಂಬಂಧ ಇಂದು ಬೆಳಿಗ್ಗೆ ನಗರದ ಮಾಜಿ ಶಾಸಕರಾದ ಶ್ರೀ ಕೆ ಬಿ ಪ್ರಸನ್ನ ಕುಮಾರ್ ರವರು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಮನೆ ಕಳೆದುಕೊಂಡ ಕುಟುಂಬಗಳಿಗೆ ಸಾಂತ್ವಾನ ಹೇಳಿ, ನಿಮ್ಮ ಜೊತೆಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದರು.
ಈ ಸಂಬಂಧ ಪಾಲಿಕೆ ಹಾಗೂ ಜಿಲ್ಲಾಡಳಿತದ ವತಿಯಿಂದ ಆಗಬೇಕಿರುವ ಪರಿಹಾರ ಕಾರ್ಯಗಳನ್ನು ತಕ್ಷಣ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು, ತಹಸೀಲ್ದಾರ್ ಹಾಗೂ ಪಾಲಿಕೆ ಆಯುಕ್ತರನ್ನು ಅಗ್ರಹಿಸುವುದಾಗಿಯೂ ಭರವಸೆ ನೀಡಿದರು.