ಶಿವಮೊಗ್ಗ : ಸ್ವಾತಂತ್ರ್ಯ ಭಾರತದ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗ ಅಭಿಯಾನವು ದೇಶವ್ಯಾಪಿಯಾಗಿ ನೆಡೆಯಲಿದ್ದು, ಭಾರತ ಸರ್ಕಾರ, ಕೇಂದ್ರ ಸಂವಹನ ಶಾಖೆ, ಶಿವಮೊಗ ಕರ್ನಾಟಕ ವಲಯ ವಾರ್ತಾ ಮತ್ತು ಪ್ರಸಾರ ಸಚಿವಾಲಯ ವತಿಯಿಂದ ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ ಕಾರ್ಯಕ್ರಮಕ್ಕೆ ಸಂಸದರಾದ ಬಿ. ವೈ ರಾಘವೇಂದ್ರ ರವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ್ ,ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಕೆ.ಎಸ್. ಗುರುಮೂರ್ತಿ, ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷರಾದ ಮೇಘರಾಜ್,
ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ರತ್ನಾಕರ್ ಶೆಣೈ, ಮಂಡಲ ಅಧ್ಯಕ್ಷರಾದ ಮಂಜುನಾಥ್ ಪಕ್ಷದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.