ಶಿವಮೊಗ್ಗ ನಗರದಲ್ಲಿ ಬುಧವಾರದಿಂದ ಸಂಜೆಯ ನಂತರ ವ್ಯಾಪಾರ ವಹಿವಾಟಿಗೆ ಪೊಲೀಸರು ಅವಕಾಶ ನಿರಾಕರಿಸುತ್ತಿದ್ದು ಇದರಿಂದ ವರ್ತಕರಿಗೆ ಸಾಕಷ್ಟು ಅನಾನುಕೂಲವಾಗುತ್ತಿದೆ ನಿಯಮಾನುಸಾರ ವ್ಯಾಪಾರ-ವಹಿವಾಟಿಗೆ ಅವಕಾಶ ನೀಡುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಈ ಸಂಬಂಧ ಬುಧವಾರ ನಗರದ ಡಿಸಿ ಕಚೇರಿಯಲ್ಲಿ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಅರ್ಪಿಸಲಾಯಿತು.
ಸಂಜೆಯ ನಂತರ ವ್ಯಾಪಾರ – ವಹಿವಾಟಿಗೆ ನಿರ್ಬಂಧ ಹಾಕುತ್ತಿರುವುದರಿಂದ ಉದ್ದಿಮೆದಾರರಿಗೆ ಅಪಾರ ನಷ್ಟ ಉಂಟಾಗುತ್ತಿದೆ.ಸದ್ಯ ನಗರದಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಕಾನೂನು-ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಈ ಹಿನ್ನಲೆಯಲ್ಲಿ ಸಂಜೆಯ ನಂತರವೂ ವ್ಯಾಪಾರ ವಹಿವಾಟಿಗೆ ನಿಯಮಾನಸಾರ ಅವಕಾಶ ನೀಡಬೇಕು ಎಂದು ಸಂಘ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದೆ.
ಮನವಿ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್ ಮೊದಲಾದವರು ಉಪಸ್ಥಿತರಿದ್ದರು.