ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ವಾಸಿ 13 ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕಿಗೆ ಮಕ್ಸೂದ್ ಎಂಬ ವ್ಯಕ್ತಿಯು ದಿನಾಂಕ 29-06-2021 ರಂದು ಲೈಂಗಿಕ ದೌರ್ಜನ್ಯವೆಸಗಿರುತ್ತಾನೆಂದು ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.
ಆಗಿನ ತನಿಖಾಧಿಕಾರಿಗಳಾದ ಶ್ರೀ ಪ್ರವೀಣ್ ನೀಲಮ್ಮನವರ್, ಸಿಪಿಐ, ತೀರ್ಥಹಳ್ಳಿ ವೃತ್ತರವರು ಪ್ರಕರಣದ ತನಿಖೆ ಕೈಗೊಂಡು ಸದರಿ ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿರುತ್ತಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಶ್ರೀ ಹರಿಪ್ರಸಾದ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, The Addl District and Sessions Court, FTSC–II (POCSO) Shivamogga ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಮಾನ್ಯ ನ್ಯಾಯಾಧೀಶರಾದ ಮೋಹನ ಜೆ.ಎಸ್ ರವರು ದಿನಾಂಕ 17-08-2022 ರಂದು ಆರೋಪಿ ಮೊಹಮ್ಮದ್ ಮಕ್ಸೂದ್ ಎಂ.ಹೆಚ್, 23 ವರ್ಷ ಈತನ ವಿರುದ್ಧ ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿತನಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 60,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶ ನೀಡಿರುತ್ತಾರೆ.