ಭದ್ರಾವತಿ ತಾಲ್ಲೂಕು ಶಂಕರಘಟ್ಟದ ಸರ್ಕಾರಿ ಪ್ರಾಥಮಿಕ ಶಾಲೆಯ ಸಹಯೋಗದೊಂದಿಗೆ ಸಿರಿಗನ್ನಡ ಮಹಿಳಾ ವೇದಿಕೆ ಭದ್ರಾವತಿ ತಾಲ್ಲೂಕು ಘಟಕವು ೭೫ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.
ಧ್ವಜಾರೋಹಣದ ನಂತರ ಪಥಸಂಚಲನ ನಡೆಯಿತು.ವೇದಿಕೆಯ ವತಿಯಿಂದ ಶಾಲೆಯ ಮಕ್ಕಳಿಗೆ ಸ್ವಾತಂತ್ರ್ಯ ಯೋಧರ ಚಿತ್ರಕಲೆ ಸ್ಪರ್ಧೆಯ ಜೊತೆಗೆ ಇನ್ನೂ ಕೆಲವು ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಬಹುಮಾನಗಳ ಪ್ರಾಯೋಜಕತ್ವವನ್ನು ಶ್ರೀ ಉಮೇಶ್ ಸಿ ಎನ್, ವೇದಿಕೆಯ ರಾಜ್ಯ ಉಪಾಧ್ಯಕ್ಷರು ವಹಿಸಿದ್ದರು. ನಂತರ ಶಾಲಾ ಮಕ್ಕಳಿಂದ ದೇಶಭಕ್ತಿ ಗೀತೆ, ನೃತ್ಯ ಹಾಗೂ ಹೋರಾಟಗಾರರ ಕೆಚ್ಚೆದೆಯ ನುಡಿಗಳನ್ನು ಅಭಿನಯಿಸುವುದರ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣವನ್ನು ತೊಟ್ಟ ಮುಗ್ಧ ಮಕ್ಕಳು ಅವರನ್ನೇ ನೆನಪಿಸುವಂತಿತ್ತು. ಎಲ್ಲರೂ ಅತ್ಯುತ್ಸಾಹದಿಂದ ವೇಷಭೂಷಣದಲ್ಲಿ ಭಾಗವಹಿಸಿದ್ದು, ಇವರಿಗೆ ಮತ್ತು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಶಾಲಾ ವತಿಯಿಂದ ಬಹುಮಾನಗಳನ್ನು ವಿತರಿಸಲಾಯಿತು.
ಮುಖ್ಯೋಪಾಧ್ಯಾಯರಿಗೆ ಮತ್ತು ಆಡಳಿತ ಮಂಡಳಿಯ ಅಧ್ಯಕ್ಷರಿಗೆ ವೇದಿಕೆಯ ವತಿಯಿಂದ ಗೌರವಿಸಲಾಯಿತು.
ಮುಖ್ಯೋಪಾಧ್ಯಾಯರಾದ ಶ್ರೀ ಹಾಲಸ್ವಾಮಿ ಸರ್, ಸಹ ಶಿಕ್ಷಕಿಯರಾದ ಶ್ರೀಮತಿ ಕೋಮಲ, ಶ್ರೀಮತಿ ಜಯಶೀಲ, ಶ್ರೀಮತಿ ವೀಣಾ, ಶಾಲಾ ಸಮಿತಿಯ ಅಧ್ಯಕ್ಷರು, ಸದಸ್ಯರುಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಸಿರಿಗನ್ನಡ ಮಹಿಳಾ ವೇದಿಕೆಯ ಉಪಾಧ್ಯಕ್ಷರಾದ ಆಶಾ ಶ್ರೀಧರ್, ಭಾರತಿ ಜಯರಾಮ್, ಧನಲಕ್ಷ್ಮೀ ದೇವರಾಜ್, ಶಾಂತಮ್ಮ, ಉಲ್ಲಾಸ್, ಶ್ರೀಧರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.