ಶಿವಮೊಗ್ಗ ಜಿಲ್ಲಾ ಜಾತ್ಯತೀತ ಜನತಾದಳ ಆಯೋಜನೆ ಮಾಡಿರುವ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ರವರ ಸಾರಥ್ಯದಲ್ಲಿ ಶಿವಮೊಗ್ಗ ಪೌರ ಕಾರ್ಮಿಕ ಮಹಿಳೆಯರಿಗೆ ಬಾಗಿನ ಅರ್ಪಣೆ ಕಾರ್ಯಕ್ರಮ ಇಂದು ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ನಡೆಯಿತು.
ಮಹಾನಗರ ಪಾಲಿಕೆ ಸದಸ್ಯ ನಾಗರಾಜ್ ಕಂಕಾರಿ ಮಾತನಾಡಿ ಕೋವಿಡ್ ಸಮಯದಲ್ಲಿ ಪೌರ ಕಾರ್ಮಿಕರು ಜೀವದ ಹಂಗು ತೊರೆದು ಕೆಲಸ ನಿರ್ವಹಿಸಿದ್ದಾರೆ. ಅವರಿಗೆ ಗೌರಿ ಗಣೇಶ ಹಬ್ಬದ ಪ್ರಯುಕ್ತ ಬಾಗಿನ ಅರ್ಪಿಸುವುದು ಮಹಾನಗರ ಪಾಲಿಕೆ ಕರ್ತವ್ಯ ಎಂದರು.
ಈ ಸಂದರ್ಭದಲ್ಲಿ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಮಾರಪ್ಪ ಜೆಡಿಎಸ್ ಮುಖಂಡರುಗಳಾದ ಗೀತಾ ಸತೀಶ್ , ಪಾಲಾಕ್ಷಿ , ಭಾಸ್ಕರ , ನರಸಿಂಹ , ಜಗದೀಶ್ ಮುಂತಾದವರು ಉಪಸ್ಥಿತರಿದ್ದರು.