ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ, ಕರ್ನಾಟಕ ಭೂ ಕಬಳಿಕೆ (ನಿಷೇಧ) ಕಾಯಿದೆ 2011ರ ಕಲಮು 2(ಡಿ) ಗೆ ತಿದ್ದುಪಡಿ ತರಲು ನಿರ್ಧಾರ ಮಾಡಿದ್ದು, ಬಹುದಿನಗಳ ಜನತೆಯ ಬೇಡಿಕೆಗೆ, ಸ್ಪಂದಿಸಿ ದಂತಾಗಿದೆ ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಪ್ರಸ್ತಾವಿತ ಕರಡು ತಿದ್ದುಪಡಿಯು, ಯಾವುದೇ ರೀತಿಯಲ್ಲಿಯೂ ವಿಧೇಯಕದ ಮೂಲ ಕರಡಿಗೆ ವಿರುದ್ದವಾಗಿರದೆ, ಗ್ರಾಮೀಣ ಪ್ರದೇಶದ, ರೈತರ ಹಾಗೂ ಇತರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಗಳನ್ನು ದಾಖಲಿಸುವುದರಿಂದ ರಕ್ಷಣೆ ದೊರೆಯುತ್ತದೆ.
ಸಣ್ಣ ಹಾಗೂ ಅತಿ ಸಣ್ಣ ರೈತರು ಹಾಗೂ ಜನಸಾಮಾನ್ಯರು, ಬಗರ್ ಹುಕುಮ್ ಸಾಗುವಳಿ ಸಂಬಂಧ, ಬೆಂಗಳೂರಿನಲ್ಲಿ ಸ್ಥಾಪಿತವಾದ ವಿಶೇಷ ನ್ಯಾಯಾಲಯಕ್ಕೆ ಅಲೆಯುವುದನ್ನು ತಪ್ಪಿಸಿದಂತಾಗುತ್ತದೆ.
ಈ ಕುರಿತು, ಸೂಕ್ತ ನಿರ್ಧಾರಕ್ಕೆ ಬಂದು, ವಿಧೇಯಕಕ್ಕೆ ತಿದ್ದುಪಡಿ ತರಲು ನಿರ್ಧರಿಸಿದ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಶ್ರೀ ಆರ್ ಅಶೋಕ್ ರವರನ್ನ ಹಾರ್ಧಿಕವಾಗಿ ಅಭಿನಂದಿಸುತ್ತೇನೆ ಎಂದರು.