ಶಿವಮೊಗ್ಗ: ಹೊಸ ಶೈಕ್ಷಣಿಕ ವ್ಯವಸ್ಥೆ ಜತೆಯಲ್ಲಿ ತಂತ್ರಜ್ಞಾನದ ಸದುಪಯೋಗ ಪಡಿಸಿಕೊಂಡು ಉತ್ತಮ ವ್ಯಕ್ತಿತ್ವ ಹೊಂದಿರುವ ಪ್ರಜೆಗಳನ್ನು ರೂಪಿಸಿ ಸದೃಢ ರಾಷ್ಟç ನಿರ್ಮಾಣ ಮಾಡಲು ಶಿಕ್ಷಕರು ಮುಂದಾಗಬೇಕು ಎಂದು ಶಿವಮೊಗ್ಗ ಜಿಲ್ಲಾ ಶಿಕ್ಷಣ ತರಬೇತಿ ಕೇಂದ್ರದ ಪ್ರಾಚಾರ್ಯ ಬಿ.ಆರ್.ಬಸವರಾಜಪ್ಪ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಉತ್ತರ ವತಿಯಿಂದ ಕೆ.ಟೆಕ್ ಸಂಸ್ಥೆಯ ಡು ಮೈಂಡ್ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ವಿನ್ಯಾಸ-2022 ಶಿಕ್ಷಕರ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಹೊಸ ಶೈಕ್ಷಣಿಕ ವ್ಯವಸ್ಥೆ ಮುಖಾಂತರ ಎಲ್ಲ ಸಾಧ್ಯತೆಗಳನ್ನು ಬಳಸಿಕೊಂಡು ನುರಿತ ತಂತ್ರಜ್ಞಾನದ ನೆರವಿನೊಂದಿಗೆ ಸತ್ಪçಜೆಗಳನ್ನು ದೇಶಕ್ಕೆ ಕೊಡುಗೆಯಾಗಿ ನೀಡಲು ಶಿಕ್ಷಕರು ಶ್ರಮಿಸಬೇಕು. ದೇಶದ ಅಭಿವೃದ್ಧಿ ಹಾಗೂ ಪ್ರಗತಿಯಲ್ಲಿ ನಾವೆಲ್ಲರೂ ಭಾಗಿಯಾಗಬೇಕು ಎಂದು ತಿಳಿಸಿದರು.
ರೋಟರಿ ಕ್ಲಬ್ ಶಿವಮೊಗ್ಗ ಉತ್ತರದ ಅಧ್ಯಕ್ಷ ಸರ್ಜಾ ಜಗದೀಶ್ ಮಾತನಾಡಿ, ಅಂತರಾಷ್ಟಿçÃಯ ರೋಟರಿ ಸಂಸ್ಥೆಯ ಸಹಯೋಗದಲ್ಲಿ ನಮ್ಮ ಸಂಸ್ಥೆ ವತಿಯಿಂದ ವಿಶೇಷ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಶುಚಿಯಾದ ನೀರು, ಉತ್ತಮ ಶೌಚಗೃಹ, ಮಹಿಳೆಯರ ಆರೋಗ್ಯ ಸುರಕ್ಷತೆ ಬಗ್ಗೆ ವಿಶೇಷ ಜಾಗೃತಿ ಮೂಡಿಸಲಾಗುತ್ತಿದೆ. ಜಾಗತಿಕ ರೋಟರಿ ಅನುದಾನದ ಮೂಲಕ ಸಮಾಜಮುಖಿ ಚಟುವಟಿಕೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತದೆ ಎಂದು ಹೇಳಿದರು.

ಬದಲಾದ ಪರಿಸ್ಥಿತಿಯಲ್ಲಿ ಹೊಸ ಶಿಕ್ಷಣ ಪದ್ಧತಿಯಲ್ಲಿ ಶಿಕ್ಷಕರ ಕೌಶಲ್ಯ ವೃದ್ಧಿಯು ಮುಖ್ಯವಾಗಿದೆ. ಧನಾತ್ಮಕ ಚಿಂತನೆಗಳನ್ನು ಮಕ್ಕಳಲ್ಲಿ ಬೆಳೆಸಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ನವಭಾರತ ನಿರ್ಮಾಣದ ಸತ್ಪçಜೆಗಳ ತರಬೇತಿಯೊಂದಿಗೆ ಕಾರ್ಯಾಗಾರ ಯಶಸ್ವಿಯಾಗಿದೆ ಎಂದು ತಿಳಿಸಿದರು.
ಶಿಕ್ಷಕರ ತರಬೇತಿ ಸಂಸ್ಥೆಯ ಅಶ್ವಿನ್ ಅವರು ತರಬೇತಿಯ ಪ್ರಾಮುಖ್ಯತೆಯನ್ನು ವಿವರಿಸಿದರು. ರೋಟರಿ ಮಾಜಿ ಜಿಲ್ಲಾ ಗವರ್ನರ್ ಪ್ರೊ. ಚಂದ್ರಶೇಖರ ಅವರು ರೋಟರಿ ಸಂಸ್ಥೆಯ ಪಾತ್ರವನ್ನು ತಿಳಿಸಿದರು. ಶಾಲೆಗೆ ನೀಡಿದ ವಸ್ತುಗಳ ನಿರ್ವಹಣೆಯ ಜವಾಬ್ದಾರಿ ಶಿಕ್ಷಕರದ್ದಾಗಿದೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾದ ನವೀನ್, ವೇಣುಗೋಪಾಲ ಮತ್ತು ವೆಂಕಟೇಶ್ ಅವರು ಶಿಕ್ಷಕರಿಗೆ ತರಬೇತಿ ನೀಡಿದರು. ಮಾಜಿ ಸಹಾಯಕ ಗವರ್ನರ್ ರವೀಂದ್ರನಾಥ ಐತಾಳ, ಜಿ. ವಿಜಯಕುಮಾರ್, ಸದಸ್ಯರಾದ ವಾರಿಜಾ ಜಗದೀಶ್, ರಮೇಶ್ , ಪ್ರಕಾಶ ಕಾನ್ಲೆ ಮತ್ತು ಬಸವರಾಜಪ್ಪ ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…