
ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಮೀನಾಕ್ಷಿ ಭವನ ಹಾಗೂ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಶನ್ ವತಿಯಿಂದ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆಯ ಬಾಕ್ಸಿಂಗ್ ಕ್ರೀಡಾಪಟುಗಳಾದ ಶಶಾಂಕ್ ಲಿಖಿತ್ ಪ್ರಜ್ವಲ್ ರವರು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಪದವಿಪೂರ್ವ ಶಿಕ್ಷಣ ಇಲಾಖೆಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಎಸ್ ಟಿ ಜೋಸೆಫ್ ಅಕ್ಷರಧಾಮ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷ ಕರಾದ ನಾಗರಾಜ್ ಮತ್ತು ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಉಪಸ್ಥಿತರಿದ್ದರು.