ಶಿವಮೊಗ್ಗ: ಸರ್ಕಾರಿ ಶಾಲೆ ಮಕ್ಕಳಿಗೆ ಅನುಕೂಲ ಒದಗಿಸುವ ದೃಷ್ಠಿಯಿಂದ ವಿಶೇಷ ಶೈಕ್ಷಣಿಕ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಮಿಡ್‌ಟೌನ್ ಅಧ್ಯಕ್ಷೆ ವೀಣಾ ಸುರೇಶ್ ಹೇಳಿದರು.

ಸರ್ಕಾರಿ ಶಾಲೆಗೆ ಬೆಂಚ್ ಹಾಗೂ ಡೆಸ್ಕ್ಗಳನ್ನು ರೋಟರಿ ಕ್ಲಬ್ ಶಿವಮೊಗ್ಗ ಮಿಡ್‌ಟೌನ್ ವತಿಯಿಂದ ಕೊಡುಗೆಯಾಗಿ ನೀಡಿ ಮಾತನಾಡಿ, ರೋಟರಿ ಸಂಸ್ಥೆಯು ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಮಹತ್ತರವಾದ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆ. ಮುಂದಿನ ದಿನಗಳಲ್ಲಿ ಸಂಸ್ಥೆ ವತಿಯಿಂದ ಮತ್ತಷ್ಟು ಸಮಾಜಮುಖಿ ಚಟುವಟಿಕೆಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.
ರೋಟರಿ ಕ್ಲಬ್ ಶಿವಮೊಗ್ಗ ಮಿಡ್ ಟೌನ್ ಸದಸ್ಯರ ಸಹಕಾರದಿಂದ ಎರಡು ಸರ್ಕಾರಿ ಶಾಲೆಗಳಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು 93 ಸಾವಿರ ರೂ. ವೆಚ್ಚದಲ್ಲಿ ಒದಗಿಸಲು ಸಾಧ್ಯವಾಗಿದೆ. ಶಿಕ್ಷಣಕ್ಕೆ ನೆರವಾಗುವ ಕಾರ್ಯಗಳಿಗೆ ಸಹಕರಿಸಿದ ಎಲ್ಲರಿಗೂ ಅಭಿನಂದನೆಗಳು ಎಂದರು.
ರಟ್ಟಿಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಕ್ಲಬ್ ಶಿವಮೊಗ್ಗ ಮಿಡ್‌ಟೌನ್ ವತಿಯಿಂದ 15 ಬೆಂಚ್ ಹಾಗೂ ಡೆಸ್ಕ್ಗಳನ್ನು ವಿತರಿಸಲಾಯಿತು. ಎಲ್ಲ ಸದಸ್ಯರ ಆರ್ಥಿಕ ಸಹಕಾರದಿಂದ ಶಾಲೆಗೆ ನೆರವು ನೀಡಲಾಯಿತು.

ರೋಟರಿ ಸಂಜೆ ಕುಟುಂಬಕೂಟದಲ್ಲಿ ರೋಟರಿ ಪಿಡಿಜಿ ರಾಮಚಂದ್ರಮೂರ್ತಿ ಮತ್ತು ಜನ್ಮದಿನ, ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಸದಸ್ಯರು ಉಪಸ್ಥಿತರಿದ್ದರು. ಸಂಭ್ರಮ ಆಚರಿಸಿಕೊಂಡ ಎಲ್ಲ ಸದಸ್ಯರ ಆರ್ಥಿಕ ಸಹಕಾರದಿಂದ 25 ಕುರ್ಚಿಗಳನ್ನು 1 ರಿಂದ 3ನೇ ತರಗತಿ ಮಕ್ಕಳಿಗೆ ಅನುಕೂಲವಾಗಲು ಸರ್ಕಾರಿ ಶಾಲೆಗೆ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮೀರಾ ನಾಡಿಗ್, ಸುನೀತಾ ಚೇತನ್, ಗಿರಿಜ ರವೀಂದ್ರ, ಸ್ವರ್ಣ ಮುರಳಿ, ಉಮಾ ಅಮರ್, ವಿದ್ಯಾ ಮಲ್ಲಿಕಾರ್ಜುನ್, ಸುರೇಶ್ ಕುಮಾರ್ ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…