ಶಿವಮೊಗ್ಗ: ಸೇವೆ ಎಂಬ ಸವಿ ಜೇನನ್ನು ಸವಿದವರಿಗೆ ಮಾತ್ರ ಅನುಭವ ಆಗುತ್ತದೆ. ಶ್ರಮಯೇವ ಜಯತೇ ಎನ್ನುವ ರೀತಿ ಪ್ರಾಮಾಣಿಕವಾದ ಶ್ರಮ ಹಾಗೂ ಪ್ರಯತ್ನಕ್ಕೆ ಜಯ ಸಿಕ್ಕೇ ಸಿಗುತ್ತದೆ ಎಂದು ಕುವೆಂಪು ವಿಶ್ವವಿದ್ಯಾಲಯ ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ನಾಗರಾಜ್ ಪರಿಸರ ಹೇಳಿದರು.
ಕುವೆಂಪು ವಿಶ್ವವಿದ್ಯಾಲಯ ಮತ್ತು ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ವತಿಯಿಂದ ಚಂದನ ಸಭಾಂಗಣದಲ್ಲಿ ಆಯೋಜಿಸಿದ್ದ “ಅಂತಿಮ ವರ್ಷದ ಎನ್‌ಎಸ್‌ಎಸ್ ಸ್ವಯಂ ಸೇವಕರಿಗೆ ಬೀಳ್ಕೊಡುಗೆ ಸಮಾರಂಭ”ದಲ್ಲಿ ಮಾತನಾಡಿದರು.
ರಾಷ್ಟಿçÃಯ ಸೇವಾ ಯೋಜನೆಯಲ್ಲಿ ಪಾಲ್ಗೊಳ್ಳುವುದರಿಂದ ಉತ್ತಮ ವೇದಿಕೆಗಳು ವಿದ್ಯಾರ್ಥಿಗಳಿಗೆ ಲಭಿಸುತ್ತವೆ. ಸಾಧನೆ ಹಾದಿಯಲ್ಲಿ ಯಶಸ್ವಿಯಾಗಿ ಮುನ್ನಡೆಯಲು ಸಹಕಾರಿಯಾಗುತ್ತದೆ. ನಿರಂತರ ಪರಿಶ್ರಮ ಪಡುವವರಿಗೆ ಯಶಸ್ಸು ಸಿಕ್ಕೇ ಸಿಗುತ್ತದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದುಕೊಂಡು ಉನ್ನತ ಅಧಿಕಾರಿಗಳಾಗಿ ಸಮಾಜದ ಸೇವೆ ಸಲ್ಲಿಸಬೇಕು. ರಾಜ್ಯ, ರಾಷ್ಟçಮಟ್ಟದವರೆಗೆ ವಿದ್ಯಾರ್ಥಿಗಳಿಗೆ ವೇದಿಕೆ ಕಲ್ಪಿಸುವ ಜತೆಯಲ್ಲಿ ಎನ್‌ಎಸ್‌ಎಸ್ ನಮ್ಮಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ನೆರವಾಗುತ್ತದೆ ಎಂದರು.
ರೋಟರಿ ವಲಯ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಮಾತನಾಡಿ, ನಿಜವಾದ ಜೀವನ ಅರಿವು ಆಗಬೇಕೆಂದರೆ ಗ್ರಾಮೀಣ ಪ್ರದೇಶದ ಜೀವನಶೈಲಿ ಅರಿತುಕೊಳ್ಳಬೇಕು. ವಿದ್ಯಾರ್ಥಿಗಳು ಹಳ್ಳಿಗಳಲ್ಲಿ ನಡೆಯುವ ಶಿಬಿರಗಳಲ್ಲಿ ಭಾಗವಹಿಸುವುದರಿಂದ ಸಾಕಷ್ಟು ವಿಷಯಗಳನ್ನು ಕಲಿಯಲು ಸಾಧ್ಯವಾಗುತ್ತದೆ. ಸಹಜೀವನ, ಸವಾಲುಗಳು, ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಿ ಬದುಕುವುದನ್ನು ಕಲಿಸುತ್ತದೆ ಎಂದು ತಿಳಿಸಿದರು.
ಕಾಲೇಜಿನ ಪ್ರಾಚಾರ್ಯ ಪ್ರೊ. ಎಚ್.ಎಂ.ಸುರೇಶ್ ಮಾತನಾಡಿ, ನಿಜವಾಗಲೂ ಎನ್‌ಎಸ್‌ಎಸ್ ಜೀವನದಲ್ಲಿ ಅತ್ಯುತ್ತಮ ಬದಲಾವಣೆಯನ್ನು ಮಾಡುತ್ತದೆ. ವಿದ್ಯಾರ್ಥಿಗಳು ಸದಾ ಸಮಾಜ ಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಎನ್‌ಎಸ್‌ಎಸ್ ಪ್ರೇರೇಪಿಸುತ್ತದೆ ಎಂದು ತಿಳಿಸಿದರು.
ಅಂತಿಮ ವರ್ಷದ ಸ್ವಯಂಸೇವಕರು ತಾವು ಎನ್‌ಎಸ್‌ಎಸ್‌ನಿಂದ ಪಡೆದ ಜ್ಞಾನದ ಅನುಭವಗಳನ್ನು ಹಂಚಿಕೊAಡರು. ವೇದಿಕೆಯಲ್ಲಿ ಪ್ರೊ. ಕಾಜಿಮ್ ಶರೀಫ್, ಎನ್‌ಎಸ್‌ಎಸ್ ಅಧಿಕಾರಿ ಪ್ರೊ. ಕೆ.ಎಂ.ನಾಗರಾಜ್, ಪ್ರೊ.ಎಸ್.ಜಗದೀಶ್, ಪ್ರೊ.ಎನ್.ಮಂಜುನಾಥ ಉಪಸ್ಥಿತರಿದ್ದರು.