ಶಂಕರಘಟ್ಟ ನ್ಯೂಸ್…

ಕುವೆಂಪು ವಿಶ್ವವಿದ್ಯಾಲಯ ಪರೀಕ್ಷಾ ಶುಲ್ಕವನ್ನು ಹೆಚ್ಚಳ ಮಾಡಿದ್ದು, ಇದರಿಂದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಹೊರೆಯಾಗುತ್ತಿದೆ. ರಾಜ್ಯದ ಬೇರೆ ಬೇರೆ ವಿಶ್ವವಿದ್ಯಾಲಯಗಳಲ್ಲಿ ಪರೀಕ್ಷಾ ಶುಲ್ಕ ಕಡಿಮೆ ಇದೆ. ಆದರೆ, ಇದಕ್ಕೆ ವ್ಯತಿರಿಕ್ತವಾಗಿ ಕುವೆಂಪು ವಿವಿಯಲ್ಲಿ ದುಬಾರಿ ಪರೀಕ್ಷಾ ಶುಲ್ಕ ವಸೂಲು ಮಾಡುತ್ತಿರುವುದನ್ನು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಖಂಡಿಸುತ್ತದೆ.

ಕೂಡಲೇ ಮಾನ್ಯ ಕುಲಸಚಿವರು ಹೆಚ್ಚಿಸಿರುವ ಪರೀಕ್ಷಾ ಶುಲ್ಕವನ್ನು ಕಡಿಮೆ ಮಾಡಬೇಕು. ಹಾಗೆಯೇ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿರುವುದರಿಂದ ಬಹುತೇಕ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸದೇ ಇರುವುದರಿಂದ ಪರೀಕ್ಷಾ ಶುಲ್ಕ ಪಾವತಿಸಲು ಕಾಲಾವಕಾಶ ಬೇಕಾಗಿದ್ದು, ಪರೀಕ್ಷಾ ಶುಲ್ಕ ಪಾವತಿಯ ದಿನಾಂಕವನ್ನು ವಿಸ್ತರಿಸಬೇಕೆಂದು ಈ ಮೂಲಕ ಆಗ್ರಹಿಸುತ್ತಿದ್ದೇವೆ.

ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳದಿದ್ದಲ್ಲಿ ಎನ್.ಎಸ್.ಯು.ಐ. ವತಿಯಿಂದ ನಡೆಸುತ್ತಿರುವ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವದು ಎಂದು ಈ ಮೂಲಕ ಎಚ್ಚರಿಸುತ್ತಿದ್ದೇವೆ.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರ ಮನವಿಯನ್ನು ಸ್ವೀಕರಿಸಿ ಮಾತನಾಡಿದ ಕುಲಪತಿಗಳು 4ದಿನಗಳ ಕಾಲ ಪರೀಕ್ಷಾ ಶುಲ್ಕವನ್ನು ಕಟ್ಟಲು ದಿನಾಂಕವನ್ನು ವಿಸ್ತರಿಸಲಾಗುವುದು ಹಾಗೂ ಪರೀಕ್ಷಾ ಶುಲ್ಕ ವಿಚಾರಕ್ಕೆ ಸಂಬಂಧಿಸಿದಂತೆ ಸಿಂಡಿಕೇಟ್ ಸಭೆಯಲ್ಲಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆಶ್ವಾಸನೆ ನೀಡಿದರು.
ಈ ಸಂದರ್ಭದಲ್ಲಿ ಎನ್ ಎಸ್ ಯುಐ ಜಿಲ್ಲಾ ಅಧ್ಯಕ್ಷ ವಿಜಯ್ ಕಾರ್ಯಾಧ್ಯಕ್ಷ ರವಿ,
ಭದ್ರಾವತಿ ತಾಲ್ಲೂಕು ಉಪಾಧ್ಯಕ್ಷ ಕೀರ್ತಿ ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವರದಿ ಪ್ರಜಾಶಕ್ತಿ…