ಶಿಕಾರಿಪುರ ತಾಲೂಕಿನ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಸಂಸದರಾದ ಬಿ. ವೈ ರಾಘವೇಂದ್ರ ಅವರ ಅಧ್ಯಕ್ಷತೆಯಲ್ಲಿ ಕಂದಾಯ, ಬಗರ್ ಹುಕುಂ, ಸಾರ್ವಜನಿಕರಿಗೆ ಮಾಶಾಸನ, ಕೋವಿಡ್ ಪರಿಹಾರ, ಮಳೆಹಾನಿ, ಬೆಳೆಹಾನಿ,ಸರ್ವೇ ವಿಷಯಗಳ ಬಗ್ಗೆ ಚರ್ಚಿಸಿ ಶೀಘ್ರವಾಗಿ ಇರುವ ಸಮಸ್ಯೆಯನ್ನು ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಸೆಲ್ವಮಣಿ ಅವರು, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ ಎಸ್ ಗುರುಮೂರ್ತಿ, ಸಾಗರ ಉಪ ವಿಭಾಗಧಿಕಾರಿ ಪಲ್ಲವಿ ,ತಹಶೀಲ್ದಾರ್ ಕವಿರಾಜ್, ಪರಮೇಶ್, ಕಂದಾಯ ಇಲಾಖೆಯ ಸಿಬ್ಬಂದಿಗಳು, ಗ್ರಾಮ ಲೆಕ್ಕಿಗರು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.