ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಶ್ರೀ ಹೆಚ್ಎಸ್_ಸುಂದರೇಶ್ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಮಾಜಿ ಮುಖ್ಯಮಂತ್ರಿಗಳು ಮತ್ತು ವಿಧಾನ ಸಭೆಯ ಪ್ರತಿಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ರವರ ವಿರುದ್ಧವಾಗಿ ನಾಲಿಗೆಯನ್ನು ಹರಿಬಿಟ್ಟು ಹಾಗೂ ಸೌಜನ್ಯ ವಿಲ್ಲದೆ ಶ್ರೀ ಸಿದ್ದರಾಮಯ್ಯ ರವರನ್ನು ನಿಂದಿಸಿ ಅವಮಾನವು ಮಾಡಿದ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿಯ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸುವಂತೆ ಮತ್ತು ಬಹಿರಂಗ ಕ್ಷಮೆ ಕೇಳುವಂತೆ ಆಗ್ರಹಪಡಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಉಪಾಧ್ಯಕ್ಷರು,ವಿವಿಧ ಘಟಕಗಳ ಅಧ್ಯಕ್ಷರು,ಮಹಾನಗರ ಪಾಲಿಕೆ ವಿ. ಪ.ನಾಯಕರು, ಮ.ಪಾ ಸದಸ್ಯರು,ಹಾಗೂ ಪಕ್ಷದ ನಾಯಕರು,ಕಾರ್ಯಕರ್ತರು ಭಾಗವಹಿಸಿದ್ದರು.