ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮಾರಶೆಟ್ಟಿಹಳ್ಳಿ ಗ್ರಾಮದಲ್ಲಿ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ರವರು 17 ಗ್ರಾಪಂ ವ್ಯಾಪ್ತಿಯ 400 ಜನ ಫಲಾನುಭವಿಗಳಿಗೆ ಬಸವ ಯೋಜನೆ ಮತ್ತು ಡಾ.ಬಿ.ಆರ್ ಅಂಬೇಡ್ಕರ್ ಯೋಜನೆಯಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮಂಜೂರಾತಿ ಪತ್ರಗಳನ್ನು ವಿತರಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಾಸಕರು ರಾಜ್ಯ ಸರ್ಕಾರದ ಹಲವು ಯೋಜನೆಗಳಲ್ಲಿ ವಸತಿ ರಹಿತ ಬಡವರಿಗೆ ಮನೆ ಕಲ್ಪಸಿಕೊಡುವ ಯೋಜನೆಯನ್ನು ಕೈಗೊಂಡಿದ್ದು. ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರದಿಂದ ಇನ್ನಷ್ಟು ನಿವೇಶನ ರಹಿತರಿಗೆ ನಿವೇಶನ ಕಲ್ಪಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್, ಮಂಡಲ ಅಧ್ಯಕ್ಷರಾದ ಮಂಜುನಾಥ್, ಹಾಗೂ ಪಕ್ಷದ ಮುಖಂಡರು, ಪ್ರಮುಖರು, ಕಾರ್ಯಕರ್ತರುಗಳು ಮುಂತಾದವರು ಉಪಸ್ಥಿತರಿದ್ದರು.