ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಹೆಚ್.ಎಸ್. ಸುಂದರೇಶ್ ರವರ ನೇತೃತ್ವದಲ್ಲಿ ಮಹಾವೀರ ಸರ್ಕಲ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಕೆಪಿಸಿಸಿ ಅಧ್ಯಕ್ಷರಾದ ಶಿವಕುಮಾರ್ ರವರಿಗೆ ಮಾಜಿ ಸಚಿವ ಕೆಎಸ್ ಈಶ್ವರಪ್ಪನವರು ಮಾಧ್ಯಮದ ಮೂಲಕ ಕಳ್ಳ ಎಂಬ ಹೇಳಿಕೆ ನೀಡಿರುವುದು ಅತ್ಯಂತ ಖಂಡನೀಯ ಮತ್ತು ಕ್ಷಮಯಾಚಿಸಬೇಕು ಎಂದರು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಶಿವಕುಮಾರ್ ರವರು ನೇತೃತ್ವದಲ್ಲಿ ಕರ್ನಾಟಕದಲ್ಲಿ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರದವರು ಇ.ಡಿ ಅಸ್ತ್ರ ಬಳಸಿ ವಿನಾಕಾರಣ ತೊಂದರೆ ಕೊಡುತ್ತಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ ಬಿ ಪ್ರಸನ್ನ ಕುಮಾರ್ ಮತ್ತು ಪಕ್ಷದ ಮುಖಂಡರು, ಪ್ರಮುಖರು ,ಕಾರ್ಯಕರ್ತರು, ಉಪಸ್ಥಿತರಿದ್ದರು.