ಶಿವಮೊಗ್ಗ: ಸಮಾಜದ ಸಮಗ್ರ ಅಭಿವೃದ್ಧಿಯಲ್ಲಿ ರೋಟರಿ ಸಂಸ್ಥೆ ಮಹತ್ತರ ಪಾತ್ರ ವಹಿಸುತ್ತಿದ್ದು, ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಅತ್ತುö್ಯನ್ನತ ಸೇವಾ ಕಾರ್ಯಗಳನ್ನು ನಡೆಸುತ್ತಿದೆ ಎಂದು ಜಿಲ್ಲಾ ಗವರ್ನರ್ ಡಾ. ಜಯಗೌರಿ ಹಾದಿಗಲ್ ಹೇಳಿದರು.
ಶಿವಮೊಗ್ಗ ನಗರದ ಕಾಶಿಪುರ ಸರ್ಕಾರಿ ಹಿರಿಯ ಪ್ರಾಥಮಿ ಶಾಲೆಯಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಉತ್ತರ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಶಾಲೆಗೆ ಬೆಂಚ್ ಹಾಗೂ ಅಗತ್ಯ ಉಪಕರಣಗಳ ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸೇವೆಯೇ ಪರಮ ಗುರಿ ಎಂಬ ಆಶಯದೊಂದಿಗೆ ರೋಟರಿ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿದ್ದು, ಮಕ್ಕಳ ಶೈಕ್ಷಣಿಕ ಬೆಳವಣಿಗೆಗಾಗಿ ಸರ್ಕಾರಿ ಶಾಲೆಗಳಿಗೆ ಅಗತ್ಯವಿರುವ ಮೂಲಸೌಕರ್ಯ ಒದಗಿಸುವ ಉತ್ತಮ ಕಾರ್ಯ ನಡೆಸುತ್ತಿದೆ. ಮಕ್ಕಳೇ ದೇಶದ ಮುಂದಿನ ಭವಿಷ್ಯ ಆಗಿದ್ದು, ಉತ್ತಮ ಶಿಕ್ಷಣ ನೀಡಬೇಕಿರುವುದು ಎಲ್ಲರ ಜವಾಬ್ದಾರಿ ಎಂದು ತಿಳಿಸಿದರು.
ರೋಟರಿ ಕ್ಲಬ್ ಶಿವಮೊಗ್ಗ ಉತ್ತರ ವತಿಯಿಂದ ಸೆಪ್ಟೆಂಬರ್ ತಿಂಗಳ ಅವಧಿಯನ್ನು ಸಾಕ್ಷರತಾ ತಿಂಗಳಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಅಭಿನಂದನೀಯ ಕಾರ್ಯ. ಮುಂದಿನ ದಿನಗಳಲ್ಲಿ ಹೆಚ್ಚಿನ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಬೇಕು ಎಂದರು.
ಇದೇ ಸಂದರ್ಭದಲ್ಲಿ ಶಾಲಾಭಿವೃದ್ಧಿ ಯೋಜನೆಯಡಿ 12 ಶಾಲೆಗಳಿಗೆ 10 ಸಾವಿರ ಡಾಲರ್ ಮೌಲ್ಯದ ಶಾಲಾ ಉಪಕರಣಗಳನ್ನು ಕೊಡುಗೆಯಾಗಿ ನೀಡಲಾಗುತ್ತಿದೆ.
ಮಹಾನಗರ ಪಾಲಿಕೆ ಸದಸ್ಯೆ ಅನಿತಾ ರವಿಶಂಕರ್, ಸಹಾಯಕ ಗವರ್ನರ್ ಸುನೀತಾ ಶ್ರೀಧರ್, ರೋಟರಿ ಕ್ಲಬ್ ಶಿವಮೊಗ್ಗ ಉತ್ತರ ಅಧ್ಯಕ್ಷ ಸರ್ಜಾ ಜಗದೀಶ್, ಕಾರ್ಯದರ್ಶಿ ವೆಂಕಟೇಶ್, ಪ್ರೊ. ಎ.ಎಸ್.ಚಂದ್ರಶೇಖರ್, ಶಾಲೆಯ ಮುಖ್ಯ ಶಿಕ್ಷಕ ಹಾಲೇಶ ನಾಯ್ಕ, ಕ್ಲಬ್ ಸಮುದಾಯ ಸೇವೆಗಳ ನಿರ್ದೇಶಕ ಯು.ರವೀಂದ್ರನಾಥ ಐತಾಳ್, ರೋಟರಿ ಮಾಧ್ಯಮ ಪ್ರತಿನಿಧಿ ಜಿ.ವಿಜಯ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.