ಕೆರೆಯಲ್ಲಿ ಜಾರಿ ಬಿದ್ದು ಮೃತಪಟ್ಟ ಪಿಯುಸಿ ವಿದ್ಯಾರ್ಥಿ ರವಿನಾಯ್ಕ್ ಕುಟುಂಬದವರಿಗೆ ಮಾನ್ಯ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಒದಗಿಸುವಂತೆ ಕೋರಿ ಬಂಜಾರ ವಿದ್ಯಾರ್ಥಿ ಸಂಘದ ವತಿಯಿಂದ ಮನವಿ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
ಶಿವಮೊಗ್ಗ ತಾಲೂಕು ಬೀರನಕೆರೆ ತಾಂಡಾದ ಪಿಯುಸಿ ವಿದ್ಯಾರ್ಥಿ ರವಿನಾಯ್ಕ್ ದಿನಾಂಕ 25/09/2022 ರಂದು ಕೆರೆಯಲ್ಲಿ ಹಸುವಿಗೆ ನೀರು ಕುಡಿಸಲು ಹೋಗಿ ನಿಯಂತ್ರಣ ತಪ್ಪಿ ನೀರಿನಲ್ಲಿ ಬಿದ್ದು ಮೃತಪಟ್ಟಿದ್ದು ಕಡುಬಡತನದಿಂದ ಕೂಡಿದ ಇವರ ಕುಟುಂಬಕ್ಕೆ ಆಕಸ್ಮಿಕ ದುರ್ಘಟನೆಗಳಿಗೆ ಸಂಬಂಧಿಸಿದಂತೆ ಮಾನ್ಯ ಮುಖ್ಯಮಂತ್ರಿಗಳು, ಪ್ರದತ್ತವಾಗಿರುವ ವಿವೇಚನಾನುಸಾರ ಘೋಷಿಸುವ ಪರಿಹಾರದ ಅಡಿಯಲ್ಲಿ 10 ಲಕ್ಷ ರೂಪಾಯಿಗಳ ಪರಿಹಾರವನ್ನು ನೊಂದ ಕುಟುಂಬಕ್ಕೆ ನೀಡಬೇಕೆಂದು ಕೋರಿದರು.
ಪೋಷಕರಿಗೆ ಏಕೈಕ ಮಗನಾಗಿ ಮನೆಯ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತು ಉಜ್ವಲ ಭವಿಷ್ಯದ ಕನಸು ಹೊತ್ತಿದ್ದ ರವಿನಾಯ್ಕ್ ಆಗಲುವಿಕೆಯಿಂದಾಗಿ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.ವಾಸಿಸಲು ಯೋಗ್ಯವಾದ ಮನೆ ಇಲ್ಲದಷ್ಟು ಕಡುಬಡತನದಿಂದ ಕೂಡಿರುವ ಇವರ ಕುಟುಂಬಕ್ಕೆ ಕುಂಚೇನಹಳ್ಳಿ ಗ್ರಾಮ ಪಂಚಾಯತಿ ವತಿಯಿಂದ ನಿವೇಶನ ಒದಗಿಸಿ ಮನೆ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಬೇಕೆಂದು ಆಗ್ರಹಿಸುತ್ತೇವೆ.ಮೇಲ್ಕಂಡ ಬೇಡಿಕೆಗಳ ಕುರಿತಾಗಿ ಅಗತ್ಯ ಕ್ರಮ ಕೈಗೊಂಡು ತೀವ್ರ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಆಸರೆಯಾಗಬೇಕೆಂದು ವಿನಂತಿಸಿಕೊಳ್ಳುತ್ತೇವೆ.
ಈ ಸಂದರ್ಭದಲ್ಲಿ ಬಂಜಾರ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷರಾದ ಗಿರೀಶ್ ಡಿ.ಆರ್,ನ್ಯಾಮತಿ ತಾಲೂಕು ಬಂಜಾರ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮಂಜುನಾಯ್ಕ್,ಪ್ರಮುಖರಾದ ಕಲ್ಲೇಶ್ ನಾಯ್ಕ್,ವಿನಾಯಕ ನಾಯ್ಕ್,ಧನಲಕ್ಷ್ಮಿಬಾಯಿ,ಬೇಬಿಬಾಯಿ,ಕವಿತಾಬಾಯಿ,
ಶೋಭಾ ಬಾಯಿ ಹಾಗು ಬೀರನಕೆರೆ ತಾಂಡದ ಗ್ರಾಮಸ್ಥರು ಉಪಸ್ಥಿತರಿದ್ದರು.