ಶಾರದಾ ಶಾಲಾಭಿವೃದ್ಧಿ ಸಮಿತಿ ವತಿಯಿಂದ ಸಂಸ್ಕೃತ ಗ್ರಾಮ ಮತ್ತೂರಿನಲ್ಲಿ ” ಅಮೃತ ಭಾರತೀ ” ಸಭಾಂಗಣವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪ ಸಂಸದರಾದ ಬಿ ವೈ ರಾಘವೇಂದ್ರ ರವರು ಲೋಕಾರ್ಪಣೆಗೊಳಿಸಿದರು.
ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ ,ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಹ ಕಾರ್ಯವಾಹರಾದ ಪಟ್ಟಾಭಿರಾಮ್
ಶಾಸಕರಾದ ಕೆ. ಎಸ್ ಈಶ್ವರಪ್ಪನವರು,ಮಾಡಾಳು ವಿರೂಪಾಕ್ಷಪ್ಪ, ಭಾನುಪ್ರಕಾಶ್, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ, ಅರುಣ್ ಡಿ. ಎಸ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರವಿಕುಮಾರ್, ಗ್ರಾ. ಪಂ ಅಧ್ಯಕ್ಷರಾದ ಮಹೇಶ್, ಯಾದವ ಕೃಷ್ಣ, ಮಧುಕರ್, ಹರಿಕೃಷ್ಣ ಹಾಗೂ ಶಾಲಾ ಶಿಕ್ಷಕರು, ಸಿಬ್ಬಂದಿ ವರ್ಗದವರು ಸಾರ್ವಜನಿಕರು ಉಪಸ್ಥಿತರಿದ್ದರು.