ಅಣ್ಣ ತಮ್ಮಂದಿರ ಬಾಂಧವ್ಯ, ಮಗ ತಂದೆಗೆ ನೀಡುವ ಗೌರವ, ಗಂಡ ಹೆಂಡತಿ ಉತ್ತಮ ಸಂಬಂಧ ಸೇರಿದಂತೆ ಕುಟುಂಬ ವ್ಯವಸ್ಥೆಯ ಮಹತ್ವ, ನಮ್ಮ ನಾಡಿನ ಸಂಸ್ಕೃತಿಯನ್ನು ಮಹರ್ಷಿ ವಾಲ್ಮೀಕಿ ರಾಮಾಯಣ ಗ್ರಂಥದ ಮೂಲಕ ಜಗತ್ತಿಗೆ ತಿಳಿಸಿದರು ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಬಣ್ಣಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ ವಾಲ್ಮೀಕಿ ಜಯಂತಿಯಂದು ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚಿಸಿದ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.
ಪಾವಿತ್ರ್ಯತೆಗೆ ಹೆಸರೇ ಈ ದೇಶದ ಹೆಣ್ಣು ಮಕ್ಕಳು. ಮಹಿಳೆಯರನ್ನು ತಾಯಿ ಎಂದು ಗೌರವಿಸುವ ನಾಡು ನಮ್ಮದು ಇಂತಹ ವಾಲ್ಮೀಕಿ ನಾಡಿನಲ್ಲಿ ಹುಟ್ಟಿದ ನಾವುಗಳೇ ಪುಣ್ಯವಂತರು ಎಂದು ಹೇಳಿದರು.
ದೇವಸ್ಥಾನಗಳಿಗೆ, ಮನೆಗಳಿಗೆ ಪ್ರವೇಶವಿಲ್ಲದೆ ನಮ್ಮ ಸಮಾಜದಲ್ಲಿ ಇನ್ನೂ ಕೂಡ ಅಸಮಾನತೆಯಿದೆ.ಇಂತಹ ಅಸಮಾತೆಗಳಿಂದ ನಮಗೆ ಸ್ವಾತಂತ್ರ್ಯ ದೊರಕಿಸಕೊಟ್ಟ ಸ್ವಾತಂತ್ರ್ಯ ಸೇನಾನಿಗಳಿಗೆ ದು:ಖವಾಗುತ್ತದೆ ಆದ್ದರಿಂದ ನಾವೆಲ್ಲರು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮಾನತೆಗೆ ಒಂದಾಗಿ ಶ್ರಮಿಸಬೇಕು ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸದ ಬಿ. ವೈ. ರಾಘವೇಂದ್ರ ಅವರು ಪರಿಶಿಷ್ಟ ಜಾತಿ ಮತ್ತುಪರಿಶಿಷ್ಟ ಪಂಗಡದ ಸಾಮಾಜಿಕ ಕುಗಾದ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡಲು ನ್ಯಾ. ನಾಗಮೋಹನ್ ದಾಸ್ ವರದಿಯಂತೆ ಪರಿಶಿಷ್ಟ ಪಂಗಡಕ್ಕೆ ಶೇ.3ರಿಂದ 7ಕ್ಕೇ ಹಾಗೂ ಪರಿಶಿಷ್ಟ ಜಾತಿಯವರಿಗೆ ಶೇ.15 ನಿಂದ 17%ಗೆ ಮೀಸಲಾತಿ ಹೆಚ್ಚಿಸಲು ಒಪ್ಪಿಗೆ ಸಿಕ್ಕಿದ್ದೂ, ಚಳಿಗಾಲದ ಅಧಿವೇಶನದಲ್ಲಿ ಮಂಡನೆ ಮಾಡಲಾಗುವುದು ಎಂದು ತಿಳಿಸಿದರು.
ವಾಲ್ಮೀಕಿ ನಿಗಮಕ್ಕೆ ನೀಡುತ್ತಿದ್ದ ರೂ.580ಕೋಟಿ ಅನುದಾನವನ್ನು ರೂ.990ಕೋಟಿಗೆ ಹೆಚ್ಚಿಸಲಾಗಿದೆ.ಪರಿಶಿಷ್ಟ ಜಾತಿ ಮತ್ತುಪರಿಶಿಷ್ಟ ಪಂಗಡ ಕ್ಕೆ ಉಚಿತವಾಗಿ 75 ವ್ಯಾಟ್ ವಿದ್ಯುತ್ ನೀಡಲಾಗುತ್ತದೆ. ರೂ.750 ಕೋಟಿ ವೆಚ್ಚದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿರುವ ಅಂಬೇಡ್ಕರ್ ಭವನ ಮತ್ತು ವಾಲ್ಮೀಕಿ ಸಮುದಾಯ ಭವನಗಳನ್ನು ಪುನರ್ ನಿರ್ಮಾಣ ಮಾಡಲಾಗುತ್ತದೆ ಎಂದು ಹೇಳಿದರು.
ಡಿಸೆಂಬರ್ ತಿಂಗಳಲ್ಲಿ ಏರ್ಪೋರ್ಟ್ ಉದ್ಘಾಟನೆಯಾಗಳಿದ್ದು, ಶಿವಮೊಗ್ಗ ಜಿಲ್ಲೆಗೆ 70 5ಜಿ ಟವರ್ ಗಳನ್ನು ಹೆಚ್ಚುವರಿಯಾಗಿ ನೀಡಲಾಗಿದ್ದು ನಾಲ್ಕು 4ಜಿ ಟವರ್ ಗಳ ಮಧ್ಯೆ ಒಂದು 5ಜಿ ಟವರ್ ನಿರ್ಮಿಸಲಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿ ನಯನ ಸಿದ್ದಪ್ಪ ಪೂಜಾರ್ ಅವರಿಗೆ 1ಲಕ್ಷದ ಚೆಕ್ ನೀಡಿ ಗೌರವಿಸಲಾಯಿತು.ಹಾಗೂ ಅಂತರ್ಜಾತಿ ವಿವಾಹವಾದ ದಂಪತಿಗಳಿಗೆ ಪ್ರೋತ್ಸಾಹ ಧನ ನೀಡಲಾಯಿತು.
ಮೇಯರ್ ಸುನೀತಾ ಅಣ್ಣಪ್ಪ, ಮಹಾನಗರ ಪಾಲಿಕೆಯ ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ ಮತ್ತು ಮಹಾನಗರ ಪಾಲಿಕೆ ಸದಸ್ಯ ನಾಗರಾಜು.ಡಿ, ಶಿವಮೊಗ್ಗ ನಗರಾಭಿೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಜೆ. ನಾಗರಾಜ್, ವಾಲ್ಮೀಕಿ ಅಭಿವೃದ್ಧಿ ನಿಗಮ ನಿರ್ದೇಶಕ ಬಿ.ಎಸ್ . ನಾಗರಾಜ್ ಮತ್ತು ಟಿ.ಲೋಕೇಶ್, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಂಮಣಿ, ಪೋಲಿಸ್ ವರಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ಜಿ. ಪಂ.ಸಿಇಓ ಎನ್.ಡಿ ಪ್ರಕಾಶ್, ಮಲ್ಲಿಕಾರ್ಜುನ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅಜ್ಜಪ್ಪ ಹೆಚ್.ಈ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್.ಉಮೇಶ್, ಹಾಗೂ ಸಮಾಜದ ಮುಖಂಡರು ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.