ಬೈಂದೂರು ನ್ಯೂಸ್…
1100 ಕೋಟಿ ರೂ ಶಂಕುಸ್ಥಾಪನೆ ಹಾಗೂ 200 ಕೋಟಿ ರೂಗಳ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರಿಗೆ ಆಗಮಿಸುತ್ತಿರುವ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ರವರ ಕಾರ್ಯಕ್ರಮದ ಅಂಗವಾಗಿ ಸಂಸದರಾದ ಬಿ. ವೈ. ರಾಘವೇಂದ್ರ ರವರು ಕುಂದಾಪುರ ಉಪ ವಿಭಾಗ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನೆಡೆಸಿ, ಕಾರ್ಯಕ್ರಮದ ಸ್ಥಳ ಮುಳ್ಳಿಕಟ್ಟೆಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರದ ಶಾಸಕರಾದ ಬಿ. ಎಂ ಸುಕುಮಾರ್ ಶೆಟ್ಟಿ ,ಬೈಂದೂರು ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ , ಸಿಮ್ಸ್ ಆಡಳಿತ ಮಂಡಳಿ ಸದಸ್ಯರಾದ ದಿವಾಕರ ಶೆಟ್ಟಿ ಮತ್ತು ಪಕ್ಷದ ಮುಖಂಡರು ಅಧಿಕಾರಿಗಳು ಉಪಸ್ಥಿತರಿದ್ದರು.