ಶಿವಮೊಗ್ಗ ಜಿಲ್ಲೆಯ ಸೊರಬ ವಿಧಾನಸಭಾ ಕ್ಷೇತ್ರದ ಅನವಟ್ಟಿಯಲ್ಲಿ ಬಿಜೆಪಿ ವತಿಯಿಂದ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್. ಬೊಮ್ಮಾಯಿ , ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರು ಹಾಗೂ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ನವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಸೊರಬ ದಿಕ್ಸೂಚಿ ಆಪ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಜಿಲ್ಲಾ ಉಸ್ತುವಾರಿ ಸಚಿವರಾದ ನಾರಾಯಣ ಗೌಡ,
ಸಚಿವರಾದ ಭೈರತಿ ಬಸವರಾಜ್, ಸಂಸದರಾದ ಬಿ ವೈ ರಾಘವೇಂದ್ರ ,ಸೊರಬ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಸ್ ಕುಮಾರ್ ಬಂಗಾರಪ್ಪ, ಶಾಸಕರಾದ ಅಶೋಕ್ ನಾಯ್ಕ್,ಹರತಾಳು ಹಾಲಪ್ಪ,
ವಿಧಾನ ಪರಿಷತ್ ಸದಸ್ಯರಾದ ಸದಸ್ಯರಾದ ಎಸ್ ರುದ್ರೇಗೌಡರು, ಆಯನೂರು ಮಂಜುನಾಥ್, ಅರುಣ್ ಡಿ. ಎಸ್, ಪಕ್ಷದ ಜಿಲ್ಲಾಧ್ಯಕ್ಷರಾದ ಟಿ ಡಿ ಮೇಘರಾಜ್,ಭಾನುಪ್ರಕಾಶ್, MADB ಅಧ್ಯಕ್ಷರಾದ ಗುರುಮೂರ್ತಿ, ಎಸ್ ದತ್ತಾತ್ರಿ, ಸಿದ್ದರಮಣ್ಣ, ಕಾಡಾ ಅಧ್ಯಕ್ಷರಾದ ಪವಿತ್ರಾ ರಾಮಯ್ಯ,ಮಂಡಲ ಪ್ರಭಾರಿ ಬಿ. ಕೆ ಶ್ರೀನಾಥ್, ಶಿವರಾಜ್, ಮಂಡಲ ಅಧ್ಯಕ್ಷರಾದ ಪ್ರಕಾಶ್, ರವಿಕುಮಾರ್ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು.