ಶಿವಮೊಗ್ಗ ಜಿಲ್ಲಾ ಜಾತ್ಯತೀತ ಜನತಾದಳದ ಸಂಘಟನಾ ಕಾರ್ಯದರ್ಶಿಯಾಗಿ ಎಸ್ ಬಸವರಾಜ್ ರವರನ್ನು ಜಿಲ್ಲಾಧ್ಯಕ್ಷ ಎಮ್ ಶ್ರೀಕಾಂತ್ ರವರು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.
ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷ ಸಂಘಟಿಸುವ ಮತ್ತು ಬಲಪಡಿಸುವ ಕೆಲಸ ಆಗಬೇಕು ಎಂದು ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್ ಸೂಚಿಸಿದ್ದಾರೆ. ಜಿಲ್ಲೆಯ ಸಮಸ್ತ ಜೆಡಿಎಸ್ ಮುಖಂಡರು ಕಾರ್ಯಕರ್ತರು ನೂತನ ಸಂಘಟನಾ ಕಾರ್ಯದರ್ಶಿ ಎಸ್ ಬಸವರಾಜ್ ರವರಿಗೆ ಶುಭ ಕೋರಿ ಅಭಿನಂದಿಸಿದ್ದಾರೆ.