ತೀರ್ಥಹಳ್ಳಿ ನ್ಯೂಸ್…
ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ 618 ಕೋಟಿ ರುಪಾಯಿ ವೆಚ್ಚದ ವಿವಿಧ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶೀಲಾನ್ಯಾಸವನ್ನು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ , ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ , ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರೊಂದಿಗೆ ಸಂಸದರಾದ ಬಿ. ವೈ ರಾಘವೇಂದ್ರ ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಭೈರತಿ ಬಸವರಾಜ್, ಹಾಗೂ ಜಿಲ್ಲಾ ಉಸ್ತುವಾರಿ ಹಾಗೂ ಮಾನ್ಯ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ನಾರಾಯಣ ಗೌಡ, ಶಾಸಕರಾದ ಹರತಾಳು ಹಾಲಪ್ಪ, ಮಾಜಿ ಶಾಸಕರಾದ ಸ್ವಾಮಿರಾವ್ ,ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಸುಶೀಲ ಶೆಟ್ಟಿ, ಜಿಲ್ಲಾಧಿಕಾರಿ ಡಾ. ಆರ್. ಸೆಲ್ವ ಮಣಿ , ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ,ಜಿಲ್ಲಾ ಪಂಚಾಯತ್ ಮುಖ್ಯಧಿಕಾರಿ, ಚುನಾಯಿತಾ ಪ್ರತಿನಿಧಿಗಳು ಅಧಿಕಾರಿಗಳು ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.