ಹರಮಘಟ್ಟ ಗ್ರಾಮದಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿದ್ದು ಚಿರತೆಯನ್ನ ನೋಡಲು ಜನ ಸಾಗರವೇ ಹರಿದು ಬಂದಿದೆ.
ಸುಮಾರು 15 ದಿನಗಳ ಹಿಂದೆ 3 ಹಸುಗಳನ್ನ‌ ಭೇಟೆಯಾಡಿದ್ದ ಚಿರತೆ ಹಾವಳಿ ಗ್ರಾಮಸ್ಥರಲ್ಲಿ ಭಯವನ್ನ ಹುಟ್ಟಿಸಿತ್ತು. ಇದರ ಬೆನ್ನಲ್ಲೇ ಗ್ರಾಮಸ್ಥರು ಚಿರತೆಯನ್ನ ಹಿಡಿಯಲು ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದರು.

ಹರಮಘಟ್ಟದ 200 ಮೀಟರ್ ವ್ಯಾಪ್ತಿಯಲ್ಲಿ ಬೋನು ಇಟ್ಟು ಅದರಲ್ಲಿ ನಾಯಿಯನ್ನ ಇಡಲಾಗಿತ್ತು. ಬೆಳಿಗ್ಗೆ ಚಿರತೆ ಬೋನಿಗೆ ಬಿದ್ದಿದೆ. ಗಂಡು ಚಿರತೆ ಎಂದು ಗುರುತಿಸಲಾಗಿದೆ. ಚಿರತೆಯನ್ನ ಊರಿನ‌ ಅಕ್ಷಯ ಬಾಗಿಲಿಗೆ ತಂದಿರಿಸಲಾಗಿದೆ.
ಚಿರತೆ ನೋಡಲು ಗ್ರಾಮಸ್ಥರು ಮತ್ತು ಸುತ್ತಮುತ್ತಲಿನ ಜನ ಗುಂಪು ಗುಂಪಾಗಿ ಆಗಮಿಸುತ್ತಿದ್ದಾರೆ. ಅರಣ್ಯ ಇಲಾಖೆಯವರು ಸ್ಥಳಕ್ಕೆ ದಾವಿಸಿದ್ದಾರೆ. ಚಿರತೆಯನ್ನ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿ ನಂತರ ಕಾಡಿಗೆ ಬಿಟ್ಟಿದ್ದಾರೆ.

ವರದಿ ಪ್ರಜಾಶಕ್ತಿ…