ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಕೆಲವು ದಿನಗಳ ಹಿಂದೆ ಬೆಳಗಾವಿಯ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಯು ಕನ್ನಡ ಬಾವುಟ ಹಿಡಿದ ಎಂಬ ಕಾರಣಕ್ಕೆ ಅದೇ ಕಾಲೇಜಿನ ಮರಾಠಿ ವಿದ್ಯಾರ್ಥಿಗಳು ಕನ್ನಡ ಬಾವುಟ ಹಿಡಿದ ವಿದ್ಯಾರ್ಥಿಯ ಮೇಲೆ ತಳಿಸಿದ್ದಾರೆ. ಈ ಘಟನೆ ಖಂಡಿಸಿ ರಾಜ್ಯದ್ಯಂತ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಪ್ರತಿಭಟನೆ ನಡೆಸಲಾಯಿತು. ಇಂದು ಶಿವಮೊಗ್ಗ ಘಟಕದಿಂದ ಜಿಲ್ಲಾಧ್ಯಕ್ಷ ಮಂಜುನಾಥ್ ರವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟಿಸಿ ಹಲ್ಲೆ ಕೋರರ ಮೇಲೆ ಕಠಿಣ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು. ನಂತರ ಮುಖ್ಯಮಂತ್ರಿ ರವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಮಂಜುನಾಥ್ , ರಾಜ್ಯ ಸಂಚಾಲಕರಾದ ಮಧು ,ಬಸವರಾಜ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಸಂಘಟನೆ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.