ಶಿವಮೊಗ್ಗ ನಗರದ ಶುಭಮಂಗಳ ಕಲ್ಯಾಣ ಮಂದಿರದಲ್ಲಿ ಕಟ್ಟಡ ಕಾರ್ಮಿಕರಿಗೆ ಕಿಟ್ ನೀಡುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶಾಸಕ ಕೆ ಎಸ್ ಈಶ್ವರಪ್ಪ , ಸಂಸದ ಬಿ ವೈ ರಾಘವೇಂದ್ರ ಉದ್ಘಾಟಿಸಿದರು.

ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಅರ್ಹ ಕಾರ್ಮಿಕರಿಗೆ ಮೇಷನ್,ಎಲೆಕ್ಟ್ರೀಷಿಯನ್ ಹಾಗೂ ಶಾಲಾ ಕಿಟ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ , ರುದ್ರೇಗೌಡ್ರು , ಅರುಣ್ , ಕೆ ಇ ಕಾಂತೇಶ್ , ಶಶಿಧರ್ ಮುಂತಾದವರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…