ಸರ್ಕಾರಿ ಶಾಲೆಯೊಂದರಲ್ಲಿ ಮೂಲಭೂತ ಸೌಕರ್ಯ ಕೊರತೆಯ ಬಗ್ಗೆ ಮನವಿ ನೀಡಿದ ಶಾಲಾ ಎಸ್ ಡಿ ಎಂ ಸಿ ಸದಸ್ಯರು ಹಾಗೂ ಭೂಮಿ ಸಂಸ್ಥೆಯ ಸದಸ್ಯರು ನೀಡಿದ ಮನವಿ ಮೇರೆಗೆ ಅರ್ಧ ಗಂಟೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎನ್ ಡಿ ಪ್ರಕಾಶ್ ರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿವಮೊಗ್ಗ ತಾಲ್ಲೂಕಿನ ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೆಟ್ಟಿಹಳ್ಳಿ ಗ್ರಾಮದಲ್ಲಿನ ಸರ್ಕಾರಿ ಶಾಲೆಯ ಹಲವು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಶಾಲೆಯಲ್ಲಿ 20ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ, ಆದರೂ ಹಲವು ಸೌಲಭ್ಯಗಳನ್ನು ಇವರಿಗೆ ಲಭಿಸಿರುವುದಿಲ್ಲ.

ಈ ಸಮಸ್ಯೆಗಳನ್ನು ಜಿಲ್ಲಾ ಪಂಚಾಯತ್ ಸಿಇಓ ಅವರು ಗಮನಕ್ಕೆ ಇಂದು ಶಾಲಾ ಎಸ್ ಡಿ ಎಂ ಸಿ ಸದಸ್ಯರು ಹಾಗೂ ಭೂಮಿ ಸಂಸ್ಥೆಯ ಸದಸ್ಯರು ಭೇಟಿ ನೀಡಿ ಮನವಿ ಮಾಡಿರುತ್ತಾರೆ. ತಕ್ಷಣಕ್ಕೆ ಸ್ಪಂದಿಸಿದ ಸಿಇಓ ರವರು ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದಾರೆ. ಶಾಲೆಗೆ ಅಗತ್ಯವಾದ ಮೂಲಭೂತ ವಸ್ತುಗಳನ್ನು ನಿಯಮಾನುಸಾರ ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದರು.

ವರದಿ ಪ್ರಜಾಶಕ್ತಿ…