ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿರುವ ಸೂಪರ್ ಸ್ಪೆಷಾಲಿಟಿ ಕಟ್ಟಡದಲ್ಲಿ ಶಿವಮೊಗ್ಗ ವೈದಿಕೀಯ ವಿಜ್ಞಾನ ಸಂಸ್ಥೆಯ ಕೇಂದ್ರೀಯ ಪ್ರಯೋಗಾಲಯವನ್ನು ಸಿಮ್ಸ್ ನಿರ್ದೇಶಕ ಡಾ. ವಿರೂಪಾಕ್ಷಪ್ಪ ಲೋಕಾರ್ಪಣೆ ಗೊಳಿಸಿದ್ದಾರೆ.

ಈ ಪ್ರಯೋಗಾಲಯದಲ್ಲಿ ಒಂದು ಗಂಟೆಗೆ 1000 ಜನರಿಗೆ ರಕ್ತ ಪರೀಕ್ಷೆಗೆ ಮಾಡಲು ಅನುಕೂಲವಾಗಿದೆ. ಈ ಹಿಂದೆ 640 ಜನರಿಗೆ ರಕ್ತಪರೀಕ್ಷೆ ನಡೆಸಲು ಅವಕಾಶವಿತ್ತು.ಮೆಗ್ಗಾನ್ ಆಸ್ಪತ್ರೆಯಲ್ಲಿ ಬಿಪಿ ಮತ್ತು ಶುಗರ್ , ಕಿಡ್ನಿ ಲಿವರ್ ಸಂಬಂಧ ಪಟ್ಟ ಕಾಯಿಲೆಗಳಿಗೆ ರಕ್ತ ಪರೀಕ್ಷೆ ಬಹಳ ಪ್ರಮುಖವಾಗಿತ್ತು. ಈ ಪರೀಕ್ಷಾ ಕೇಂದ್ರ ಪ್ರಾರಂಭವಾಗಿದ್ದರಿಂದ ಶಿವಮೊಗ್ಗ ಜಿಲ್ಲೆ ಮತ್ತು ಇತರ ಜಿಲ್ಲೆಗಳಿಂದ ಬರುವ ರೋಗಿಗಳಿಗೆ ತುಂಬಾ ಅನುಕೂಲವಾಗುತ್ತದೆ.

ಉದ್ಘಾಟನಾ ಸಂದರ್ಭದಲ್ಲಿ ವೈದ್ಯಕೀಯ ಅಧೀಕ್ಷಕ ಡಾ. ಶ್ರೀಧರ್ , ಜಿಲ್ಲಾ ಸರ್ಜನ್ ಡಾ. ಸಿದ್ದನಗೌಡ , ಸಿಮ್ಸ್ ಆಡಳಿತ ಮಂಡಳಿ ಸದಸ್ಯರಾದ ದಿವಾಕರ್ ಶೆಟ್ಟಿ , ಡಾ. ಗೌತಮ್ , ಡಾ. ವಾಣಿ ಕೋರಿ ಮುಂತಾದವರು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…