ಶಿವಮೊಗ್ಗ ತಾಲೂಕು ಸೋಗಾನೆ ಗ್ರಾಮದಲ್ಲಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಶಾಸಕರಾದ ಶ್ರೀ ಕೆ ಬಿ ಅಶೋಕ್ ನಾಯ್ಕ್ ಅವರ ಜನಪರ ಕಾಳಜಿ ಹಾಗೂ ಅಭಿವೃದ್ಧಿ ಕಾರ್ಯಗಳನ್ನ ಮೆಚ್ಚಿ ಇತರೆ ಪಕ್ಷದ ಕಾರ್ಯಕರ್ತರು ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಶ್ರೀ ಕೆ ಬಿ ಅಶೋಕ್ ನಾಯ್ಕ್ ಹಾಗೂ ವಿಧಾನ ಪರಿಷತ್ ಶಾಸಕರಾದ ಶ್ರೀ ಡಿ ಎಸ್ ಅರುಣ್ ರವರ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂಧರ್ಭದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷರಾದ ರತ್ನಾಕರ ಶೆಣೈ, ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಖಾರ ಸುಬ್ಬಣ್ಣ, ಮಾಮ್ಕೋಸ್ ನಿರ್ದೇಶಕರಾದ ವಿರೂಪಾಕ್ಷಪ್ಪ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ ಜಿ ಶ್ರೀಧರ್, ಮುನಿರತ್ನ, ಗಣೇಶ್, ಆನಂದ್, ಸಂಜಯ್ ಹಾಗೂ ಹಿರಿಯರು, ಮಹಿಳೆಯರು, ಕಾರ್ಯಕರ್ತರು ಉಪಸ್ಥಿತರಿದ್ದರು.