ಶಿವಮೊಗ್ಗ: ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಮಾಜಮುಖಿಯಾಗಿ ಮಹತ್ತರ ಸೇವಾ ಕಾರ್ಯಗಳನ್ನು ಮಾಡುತ್ತಿರುವ ಸಂಸ್ಥೆಗಳಲ್ಲಿ ರೋಟರಿ ಅಂತರಾಷ್ಟಿçÃಯ ಸಂಸ್ಥೆಯು ಮುಂಚೂಣಿಯಲ್ಲಿದೆ ಎಂದು 2022-23ನೇ ಸಾಲಿನ ನಿಯೋಜಿತ ಗವರ್ನರ್ ಡಾ. ಗೌರಿ ಹೇಳಿದರು.
ನಗರದ ರೋಟರಿ ಮಿಡ್‌ಟೌನ್ ಸಭಾಂಗಣದಲ್ಲಿ ಆಯೋಜಿಸಿದ್ದ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ 2021-22ನೇ ಸಾಲಿನ ಅಧ್ಯಕ್ಷರಾಗಿ ಮಂಜುನಾಥ್ ರಾವ್ ಕದಂ ಮತ್ತು ಕಾರ್ಯದರ್ಶಿಯಾಗಿ ಸತೀಶ್‌ಚಂದ್ರ ಅವರ ಪದವಿ ಸ್ವೀಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ರೋಟರಿ ಸಂಸ್ಥೆಯು ಅಂತರಾಷ್ಟಿçÃಯ ಮಟ್ಟದಲ್ಲಿ ಸದಸ್ಯರನ್ನು ಹೊಂದಿರುವ ವಿಶ್ವದ ದೊಡ್ಡ ಸೇವಾ ಸಂಘಟನೆಯಾಗಿದ್ದು, ನಿರಂತರವಾಗಿ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದೆ. ಪಲ್ಸ್ ಪೊಲಿಯೋ ಅಭಿಯಾನದ ನಂತರದಲ್ಲಿ ಪ್ರಸ್ತುತ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿಕೊಂಡು ಕಾರ್ಯ ನಿರ್ವಹಿಸುತ್ತಿದೆ. ಆರೋಗ್ಯ ಕ್ಷೇತ್ರದಲ್ಲಿಯೂ ಉತ್ತಮ ಕೆಲಸಗಳನ್ನು ಮಾಡುತ್ತಿದೆ ಎಂದು ತಿಳಿಸಿದರು.
ಕೋವಿಡ್ ಸಂದರ್ಭದಲ್ಲಿಯು ರೋಟರಿ ಸಂಸ್ಥೆಯು ಇಡೀ ದೇಶದಲ್ಲಿ ತನ್ನ ಸಂಘಟನೆ ಬಲದಿಂದ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಬಡಕುಟುಂಬಗಳಿಗೆ ನೆರವು ಒದಗಿಸುವ ಕಾರ್ಯ ನಡೆಸಿದೆ. ಲಕ್ಷಾಂತರ ಕುಟುಂಬಗಳಿಗೆ ಆಹಾರ ಸಾಮಾಗ್ರಿ ಒಳಗೊಂಡ ಕಿಟ್‌ಗಳನ್ನು ವಿತರಿಸಲಾಗಿದೆ. ಇದೇ ರೀತಿಯಲ್ಲಿ ಸೇವಾ ಕಾರ್ಯಗಳನ್ನು ಮುಂದುವರೆಸಲಿದೆ ಎಂದರು.
ರೋಟರಿ ಶಿವಮೊಗ್ಗ ಪೂರ್ವ ನೂತನ ಅಧ್ಯಕ್ಷ ಮಂಜುನಾಥ್ ರಾವ್ ಕದಂ ಮಾತನಾಡಿ, ರೋಟರಿಯ ಎಲ್ಲ ಸದಸ್ಯರ ಸಹಕಾರದಿಂದ ಅಧ್ಯಕ್ಷನಾಗಿ ಪದವಿ ಸ್ವೀಕಾರ ಮಾಡಿದ್ದು, ಒಂದು ವರ್ಷದ ಅವಧಿಯಲ್ಲಿ ಮಹತ್ತರ ಗುರಿಗಳನ್ನು ಅನುಷ್ಠಾನ ಮಾಡುವ ಬಗ್ಗೆ ಸಂಪೂರ್ಣ ಪ್ರಯತ್ನ ನಡೆಸಿ ಯಶಸ್ವಿ ಆಗುತ್ತೇವೆ ಎಂದು ಹೇಳಿದರು.
ಸಮಾಜದಲ್ಲಿ ಒಳ್ಳೆಯ ಬದಲಾವಣೆಗಳನ್ನು ತರುವಂತೆ ಸೇವಾ ಕಾರ್ಯಗಳನ್ನು ನಡೆಸಲಾಗುವುದು. ಗ್ಲೋಬಲ್ ಗ್ರಾö್ಯಂಟ್‌ನಡಿಯಲ್ಲಿ ವಿವಿಧ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಾಗುವುದು.
ಎರಡು ಕೆರೆಗಳ ಅಭಿವೃದ್ಧಿ ಮಾಡಲಾಗುತ್ತದೆ. 5 ಸಾವಿರ ಸಸಿಗಳನ್ನು ನೆಡುವ ಗುರಿ ಹೊಂದಿದ್ದು, ಈಗಾಗಲೇ ಒಂದು ಸಾವಿರ ಸಸಿಗಳನ್ನು ನೆಡಲಾಗಿದೆ. ಅವುಗಳ ಪೋಷಣೆ ಬಗ್ಗೆ ವಿಶೇಷ ಗಮನ ಹರಿಸಲಾಗುವುದು.
ವರ್ಷದ ಎಲ್ಲ ತಿಂಗಳಲ್ಲಿಯೂ ಆರೋಗ್ಯ ಶಿಬಿರ ಹಾಗೂ ರಕ್ತದಾನ ಶಿಬಿರಗಳನ್ನು ಆಯೋಜಿಸುವ ಉದ್ದೇಶ ಹೊಂದಲಾಗಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗುವುದು. ನಿಮ್ಮೆಲ್ಲರ ಮಾರ್ಗದರ್ಶನದೊಂದಿಗೆ ವರ್ಷಪೂರ್ತಿ ಉತ್ತಮ ಸಾಧನೆಗಳನ್ನು ಮಾಡಲಾಗುವುದು ಎಂದು ತಿಳಿಸಿದರು.
ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಸತೀಶ್‌ಚಂದ್ರ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಸಮಾಜಕ್ಕೆ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವಂತಹ ಅನೇಕ ಕಾರ್ಯಕ್ರಮಗಳನ್ನು ಮಾಡಿದ್ದು, ರೋಟರಿ ಸಂಸ್ಥೆಯಿAದ ರಾಜ್ಯದ್ಯಂತ ಎಸ್‌ಎಸ್‌ಎಲ್‌ಸಿ ಸರ್ಕಾರಿ ಶಾಲೆ ಮಕ್ಕಳಿಗೆ ಜ್ಞಾನದೀವಿಗೆ ಪ್ರಾಜೆಕ್ಟ್ ಅಡಿಯಲ್ಲಿ ಟ್ಯಾಬ್ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.
ಸಹಾಯಕ ಗವರ್ನರ್ ಎಲ್.ಟಿ.ತಿಮ್ಮಪ್ಪ, ಜೋನಲ್ ಲೆಫ್ಟಿನೆಂಟ್ ಎ.ಎಸ್.ಗುರುರಾಜ್, ಪ್ರಮುಖರಾದ ವಸಂತ್ ಹೋಬಳಿದಾರ್, ಕಡಿದಾಳ್ ಗೋಪಾಲ್, ಜಿ.ವಿಜಯಕುಮಾರ್, ಡಾ. ಗುಡದಪ್ಪ ಕಸಬಿ, ಅನೂಪ್, ಸಂತೋಷ್‌ಕುಮಾರ್, ಚಂದ್ರಶೇಖರಯ್ಯ, ಮಹೇಶ್, ಎಂ.ಪಿ.ನಾಗರಾಜ್, ಶ್ರೀಕಾಂತ್, ಸುಮತಿ ಕುಮಾರಸ್ವಾಮಿ ಹಾಗೂ ರೋಟರಿ ಶಿವಮೊಗ್ಗ ಪೂರ್ವ ಸದಸ್ಯರು ಉಪಸ್ಥಿತರಿರುವರು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153