ದೆಹಲಿ ನ್ಯೂಸ್…
ಸಂಸದರಾದ ಬಿ. ವೈ.ರಾಘವೇಂದ್ರ ಅವರು ಇಂದು ಸಂಸತ್ ಭವನದಲ್ಲಿ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಸಿಂಗ್ ಪುರಿ ಇವರನ್ನು ಭೇಟಿಯಾಗಿ ಪ್ರಸಕ್ತ ಹಣಕಾಸು ವರ್ಷ 2022-23ಕ್ಕೆ 2,472 KL ಹಿಂದಿನ ಹಂಚಿಕೆಗೆ ಹೆಚ್ಚುವರಿಯಾಗಿ 3,000 KL ಸಬ್ಸಿಡಿ ರಹಿತ PDS ಸೀಮೆಎಣ್ಣೆಯನ್ನು ಕರ್ನಾಟಕ ಸರ್ಕಾರಕ್ಕೆ ಮಂಜೂರು ಮಾಡಿದ್ದಕ್ಕಾಗಿ ಕೇಂದ್ರ ಸರಕಾರಕ್ಕೆ ಧನ್ಯವಾದ ತಿಳಿಸಿದರು.
ಕರ್ನಾಟಕ ಸರ್ಕಾರಕ್ಕೆ 12,195 KL ನೈಜ ಹಂಚಿಕೆಯಲ್ಲಿ, ಪ್ರಸಕ್ತ ಹಣಕಾಸು ವರ್ಷ 2022-23ಕ್ಕೆ 5,472 KL ಮಾತ್ರ ಮಂಜೂರಾಗಿದೆ. ಆದ್ದರಿಂದ, ಕರ್ನಾಟಕದ ಬಡ ಮೀನುಗಾರರಿಗೆ ಸಹಾಯ ಮಾಡುಲು ಉಳಿದ 6,723 ಕೆಎಲ್‌ಗಳನ್ನು ಕರ್ನಾಟಕ ಸರ್ಕಾರಕ್ಕೆ ಮಂಜೂರು ಮಾಡಲು ಹಾಗೂ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನಗಳನ್ನು ನೀಡಬೇಕೆಂದು ವಿನಂತಿಸಿದರು.
ಮಾನ್ಯ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ, ಅತೀ ಶೀಘ್ರದಲ್ಲಿ ಕರ್ನಾಟಕದ ಉಳಿದ ಕೋಟಾದ ಸೀಮೆಎಣ್ಣೆ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ.