ಶಿವಮೊಗ್ಗ ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟನೆಯಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ಅವರು ಅಧಿಕಾರಿ ಸಭೆಯಲ್ಲಿ ಮಾತನಾಡಿ ” ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಅನುಕೂಲವಾಗಲು ಮತ್ತು ಸಾರ್ವಜನಿಕರ ವಾಹನಗಳ ಓಡಾಟಕ್ಕೆ ಅನುಕೂಲವಾಗುವ ಬದಲಿ ರಸ್ತೆ ಮಾರ್ಗವನ್ನು ನಿರ್ಮಾಣ ಮಾಡಬೇಕಿದೆ, ಮತ್ತು ಹೊಸವರ್ಷಚರಣೆ, ರಜಾ ದಿನಗಳು ಹೆಚ್ಚಿರುವುದರಿಂದ ಪ್ರವಾಸಿಗರು ಶಿವಮೊಗ್ಗಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು ಇದರಿಂದ ನಗರದಲ್ಲಿ ಟ್ರಾಫಿಕ್ ಸಮಸ್ಯೆಯಾಗಲಿದೆ ಜೊತೆಗೆ ನ್ಯಾಷನಲ್ ಹೈವೇ, ಸ್ಮಾರ್ಟ್ ಸಿಟಿ ಕಾಮಗಾರಿಗಳು ಪ್ರಗತಿಯಲ್ಲಿ ಇರುವುದರಿಂದ ಅವುಗಳನ್ನು ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿರ್ವಹಿಸಿ ಎಂದು ಸಂಸದರಾದ ಬಿ. ವೈ ರಾಘವೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೇಲ್ವಕುಮಾರ್, ಜಿಲ್ಲಾಧಿಕಾರಿ ಡಾ ಸೆಲ್ವಮಣಿ ಅವರು, ರಕ್ಷಣಾಧಿಕಾರಿ ಮಿಥುನ್ ಕುಮಾರ್, ರೈಲ್ವೇ ಅಧಿಕಾರಿ ಶ್ರೀಧರ ಮೂರ್ತಿ, ಬಸವರಾಜ್ ರಾಜಕುಮಾರ್ , ನ್ಯಾಷನಲ್ ಹೈವೆಯ ಪೀರ್ ಪಾಷಾ,
ಸ್ಮಾರ್ಟ್ ಸಿಟಿ ಅಧಿಕಾರಿಗಳು ಚಿದಾನಂದ ವಟಾರೆ, ಕಮಿಷನರ್ ಮಾಯಣ್ಣ ಗೌಡ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ…