ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರು ಸಿದ್ದಿಪುರ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಸೈದರಕಲ್ಲಹಳ್ಳಿ, ಆನವೇರಿ, ಮಂಗೋಟೆ, ಸನ್ಯಾಸಿಕಕೋಡಮಗ್ಗೆ, ನಾಗಸಮುದ್ರ, ಸಿದ್ದಿಪುರ, ಡಾಣಯಕಪುರ, ಹೊಳೆಹೊನ್ನೂರು, ಮಾರ್ಗವಾಗಿ ಸಂಚರಿಸುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಾಹನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಪ್ರಮುಖರು, ಕಾರ್ಯಕರ್ತರುಗಳು, ಗ್ರಾಮ ಪಂಚಾಯತಿ ಚುನಾಯಿತ ಸದಸ್ಯರುಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.