ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕರ ಕಚೇರಿಯಲ್ಲಿ ಲಿಂಗೈಕ್ಯರಾದ ಜ್ಞಾನಯೋಗಾಶ್ರಮದ ಪೀಠಾಧೀಶರಾದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾರಂಗನಾಥ್ ರವರು ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಧಾರ್ಮಿಕ ಪ್ರವಚನದ ಮೂಲಕ ಸಮಾಜವನ್ನು ಸನ್ಮಾರ್ಗದಲ್ಲಿ ನಡೆಸುತ್ತಿದ್ದ ದಾರ್ಶನಿಕ ಗುರುವಿನ ಅಗಲಿಕೆ ವೈಯಕ್ತಿಕವಾಗಿ ಮತ್ತು ನಾಡಿಗೆ ತುಂಬಿಬಾರದ ನಷ್ಟ ಉಂಟು ಮಾಡಿದೆ ,ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ದಿವ್ಯ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಮಠದ ಅನುಯಾಯಿಗಳಿಗೆ ಮತ್ತು ಭಕ್ತವೃಂದಕ್ಕೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಹೆಚ್ ಸಿ ಯೋಗೇಶ್,ಪ್ರಮುಖರಾದ ಹೆಚ್ ಪಿ ಗಿರೀಶ್, ಬಿ ಲೋಕೇಶ್ ಚಂದನ್, ವಿರೂಪಾಕ್ಷಪ್ಪ, ಸಿ.ಎಂ ಚಿನ್ಮಯ್ ಹಾಗೂ ಇತರರು ಇದ್ದರು.