ಶಿವಮೊಗ್ಗ ಜಿಲ್ಲಾ ಜಂಗಮ ಸಮಾಜ ಸಾಂಸ್ಕೃತಿಕ ಭವನ ಶಿಲಾನ್ಯಾಸ ಹಾಗೂ ಭೂಮಿಪೂಜೆಯ ಸಮಾರಂಭದಲ್ಲಿ ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರ ಅವರೊಂದಿಗೆ ಸೂಡಾ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಎಸ್.ಎಸ್. ಜ್ಯೋತಿಪ್ರಕಾಶ್ ಅವರು ಭಾಗಿಯಾಗಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಿದರು.
ಸಾಂಸ್ಕೃತಿಕ ಭವನದ ಶಿಲಾನ್ಯಾಸ ಸಮಾರಂಭದಲ್ಲಿ ಉಜ್ಜೈನಿ ಪೀಠದ ಪೀಠಾಧಿಪತಿಗಳಾದ ಶ್ರೀ ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳು ಹಾಗೂ ಆನಂದಪುರ ಬೆಕ್ಕಿನಕಲ್ಮಠದ ಪೂಜ್ಯರಾದ ಶ್ರೀಮನ್ಮಹಾರಾಜ ನಿರಂಜನ ಜಗದ್ಗುರು ಡಾ|| ಶ್ರೀ ಮಲ್ಲಿಕಾರ್ಜುನ ಮುರಘರಾಜೇಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಸಕಲ ಪೂಜಾ ವಿಧಿ ವಿಧಾನಗಳೊಂದಿಗೆ ಭೂಮಿ ಪೂಜೆ ನೆರವೇರಿಸಿ ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದರು.
ಈ ಸಮಾರಂಭದಲ್ಲಿ ಬಿಳಕಿ ಮಠದ ಶ್ರೀಗಳು, ಚೌಕಿ ಮಠದ ಶ್ರೀಗಳು, ತೊಗರ್ಸಿ ಮಠದ ಶ್ರೀಗಳು, ಜಡೆ ಮಠದ ಶ್ರೀಗಳು, ಜಂಗಮ ಸಮಾಜದ ಗೌರವ ಅಧ್ಯಕ್ಷರಾದ ಶ್ರೀ ಟಿ.ವಿ. ಈಶ್ವರಯ್ಯ ಅವರು, ನೌಕರರ ಸಂಘದ ರಾಜ್ಯ ಅಧ್ಯಕ್ಷರಾದ ಶ್ರೀ ಷಡಾಕ್ಷರಿ ಅವರು, ಸಮಾಜದ ಹಲವಾರು ಪ್ರಮುಖರು, ಹಿರಿಯರು, ಗಣ್ಯರು ಹಾಗೂ ಜಂಗಮ ಸಮಾಜದ ಪದಾಧಿಕಾರಿಗಳು ಉಪಸ್ಥಿತರಿದ್ದರು.