ಶಿವಮೊಗ್ಗ ಜಿಲ್ಲಾ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ತನಿಖಾಧಿಕಾರಿಗಳು ಮತ್ತು ತನಿಖಾ ಸಹಾಯಕರುಗಳಿಗೆ POCSO ಪ್ರಕರಣದ ಕುರಿತು ತರಬೇತಿ ಕಾರ್ಯಾಗಾರವನ್ನು
ಹಮ್ಮಿಕೊಂಡಿದ್ದು ಸದರಿ ಕಾರ್ಯಾಗಾರದಲ್ಲಿ ಮಾನ್ಯ ನ್ಯಾಯಾಧೀಶರಾದ ಶ್ರೀಮತಿ ಲತಾ, Addl District and Sessions Judge, FTSC–I* (POCSO) Shivamogga ನ್ಯಾಯಾಲಯ, ಮಾನ್ಯ ನ್ಯಾಯಾಧೀಶರಾದ ಶ್ರೀ ಮೋಹನ ಜೆ. ಎಸ್, The Addl District and Sessions Court, FTSC–II ನ್ಯಾಯಾಲಯ, ವೈಧ್ಯಾಧಿಕಾರಿಗಳಾದ ಡಾ|| ವಿಕ್ರಮ್ ಪಾಲೇಮಾರ್, ಕೆಎಂಸಿ ಮಣಿಪಾಲ್ ಆಸ್ಪತ್ರೆ
ಉಡುಪಿ ಮತ್ತು ಪೊಲೀಸ್ ಅಧಿಕಾರಿಗಳಾದ ಶ್ರೀ ಕುಮಾರಸ್ವಾಮಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಚಿತ್ರದುರ್ಗ ಜಿಲ್ಲೆರವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ, ಪೋಕ್ಸೋ ಪ್ರಕರಣಗಳ ತನಿಖಾ ಕ್ರಮ, ಸಾಕ್ಷ್ಯಾಧಾರ ಸಂಗ್ರಹಣೆ, ವೈದ್ಯಕೀಯ ಪರೀಕ್ಷೆಗಳ ಪ್ರಶ್ನಾವಳಿಗಳು ಹಾಗೂ Standard Operating Procedure
ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ
ಶ್ರೀ ಮಿಥುನ್ ಕುಮಾರ್ ಜಿ.ಕೆ, ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭುಮ ರೆಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ರೋಹನ್ ಜಗದೀಶ್, ಐಪಿಎಸ್, ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕರು, ಸಾಗರ ಉಪ ವಿಭಾಗ, ಡಿವೈಎಸ್.ಪಿ ಡಿಸಿಆರ್.ಬಿ ಜಿಲ್ಲಾ ಪೊಲೀಸ್ ಕಛೇರಿ ಶಿವಮೊಗ್ಗ, ಡಿವೈಎಸ್.ಪಿ ಶಿಕಾರಿಪುರ ಉಪ ವಿಭಾಗ, ಡಿವೈಎಸ್.ಪಿ ತೀರ್ಥಹಳ್ಳಿ ಉಪ ವಿಭಾಗ ಮತ್ತು ಜಿಲ್ಲೆಯ ಎಲ್ಲಾ ಪೊಲೀಸ್ ವೃತ್ತ ನಿರೀಕ್ಷಕರು, ಪೊಲೀಸ್ ನಿರೀಕ್ಷಕರು, ಮಹಿಳಾ ಪೊಲೀಸ್ ಉಪ ನಿರೀಕ್ಷಕರು ಮತ್ತು ತನಿಖಾ ಸಹಾಯಕ ಸಿಬ್ಬಂಧಿಗಳು ಹಾಜರಿದ್ದರು.