ಶಿವಮೊಗ್ಗ ತಾಲ್ಲೂಕು ಯಲವಟ್ಟಿ ಗ್ರಾಮದಲ್ಲಿ ನಿರ್ಮಾಣ ಮಾಡಿರುವ ನೂತನ “ಶ್ರೀ ಪಾರ್ವತಿ ಪರಮೇಶ್ವರ ಸಮುದಾಯ ಭವನ”ದ ಉದ್ಘಾಟನಾ ಸಮಾರಂಭವನ್ನು ಸಂಸದರಾದ ಬಿ ವೈ ರಾಘವೇಂದ್ರ ಜೊತೆಗೆ ಸೂಡಾ ಮಾಜಿ ಅಧ್ಯಕ್ಷರಾದ ಶ್ರೀ ಎಸ್.ಎಸ್. ಜ್ಯೋತಿಪ್ರಕಾಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಆನಂದಪುರ ಬೆಕ್ಕಿನ ಕಲ್ಮಠದ ಪೀಠಾಧ್ಯಕ್ಷರಾದ ಮನ್ಮಹರಾಜ ನಿರಂಜನ ಜಗದ್ಗುರು ಡಾ|| ಶ್ರೀ ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿ ಅಧ್ಯಕ್ಷರಾದ ಪರಮೇಶ್ವರಪ್ಪ ಅವರು, ಬಿಜೆಪಿ ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಭಾನುಪ್ರಕಾಶ್ ಅವರು, ವಿಧಾನ ಪರಿಷತ್ ಶಾಸಕರಾದ ಅಯನೂರು ಮಂಜುನಾಥ್ ಅವರು, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಅಂಬಿಕಾ ಅವರು ಹಾಗೂ ಗ್ರಾಮದ ಹಲವಾರು ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…