ತೀರ್ಥಹಳ್ಳಿಯ ಸುರಭಿ ಹೋಟೆಲ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಮೇಲೆ ನಡೆದ ಹಲ್ಲೆ ನಡೆದ ಪ್ರಕರಣದಲ್ಲಿ ಗಾಯಾಳುವಾಗಿದ್ದ ಹರೀಶ ರವರನ್ನು ಮೆಗ್ಗಾನ ಆಸ್ಪತ್ರೆಯಲ್ಲಿ ಭೇಟಿ ಅರೋಗ್ಯ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು.

ನಂತರ ಮಾಧ್ಯಮದವರ ಜೊತೆ ಮಾತನಾಡಿದ ಕಿಮ್ಮನೆ ರತ್ನಾಕರ್ ರವರು ತೀರ್ಥಹಳ್ಳಿ ವಿಧಾನ ಸಭಾ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ಗೃಹ ಇಲಾಖೆಯ ವಿಫಲತೆ ಎದ್ದು ಕಾಣುತ್ತಿದೆ. ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಅರೋಪಿಗಳನ್ನು ತಕ್ಷಣ ಬಂದಿಸಬೇಕು ಇಲ್ಲದಿದ್ದರೆ ಪ್ರತಿಭಟನೆಯ ಹಾದಿ ಹಿಡಿಯುವುದು ಅನಿವಾರ್ಯವಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಜಗದೀಶ, ಸುಡೂರ್ ಶಿವಣ್ಣ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚೇತನ್, ಎನ್ ಎಸ್ ಯು ಐ ಜಿಲ್ಲಾ ಅಧ್ಯಕ್ಷ ವಿಜಯ್ ಕುಮಾರ್, ಅಲ್ಪಸಂಖ್ಯಾತ ಘಟಕದ ಮಹಮದ್ ನಿಹಾಲ್ , ಅರಿಫ್ , ರವಿ ಕಾಟಿಕೆರೆ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಮರನಾಥ ಶೆಟ್ಟಿ, ಉಪಾಧ್ಯಕ್ಷರಾದ ಜಯಕರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ವಲ್ ಗೌಡ,ಕಟ್ಟೆಹಕ್ಲು ಫಣಿರಾಜ್, ನದಿಮ್ ಬೆಟಮಕ್ಕಿ ಮತ್ತಿತರರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…