ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ವಿಧ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ವಿವಿಧ ಜಾಗೃತಿ ಕಾರ್ಯಕ್ರಮ ನಡೆಯಿತು.

ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಜಯಪ್ರಕಾಶ್ ನಾರಾಯಣ್ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ವಿಧ್ಯಾರ್ಥಿಗಳಿಗೆ ಶ್ರೀ ಬಾಲರಾಜ್, ಡಿವೈಎಸ್.ಪಿ ಶಿವಮೊಗ್ಗ – ಎ ಉಪ ವಿಭಾಗ ರವರ ನೇತೃತ್ವದಲ್ಲಿ ರಸ್ತೆ ಸುರಕ್ಷತೆ ಮತ್ತು ಕಾನೂನಿನ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡು ಸದರಿ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಮತ್ತು ಅಪಘಾತ ತಡೆಗಟ್ಟುವಲ್ಲಿ ಸಂಚಾರ ನಿಯಮಗಳ ಪಾಲನೆಯ ಪ್ರಾಮುಖ್ಯತೆ, ಮಾದಕ ವಸ್ತುವಿನ ವ್ಯವಸನದಿಂದಾಗುವ ದುಷ್ಪರಿಣಾಮಗಳು, NDPS ಕಾಯ್ದೆ, ಮತ್ತು ಕಾನೂನು ಪಾಲನೆಯ ಕುರಿತು ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರಾದ ಶ್ರೀ ಕೆಂಚಪ್ಪ, ಶ್ರೀ ವಸಂತ್ ಪಿಎಸ್ಐ ದೊಡ್ಡಪೇಟೆ ಹಾಗೂ ಸಿಬ್ಬಂಧಿಗಳು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…