ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೆಲಸ ಖಾಲಿ ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು , ಜನರು ಮೋಸ ಹೋಗದಿರಿ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ರವರು ಸ್ಪಷ್ಟಪಡಿಸಿದ್ದಾರೆ.
ಫೇಸ್ಬುಕ್ , ವಾಟ್ಸಾಪ್ ಮತ್ತು ಇನ್ಸ್ಟಾಗ್ರಾಮ್ ನಲ್ಲಿ ಸುಳ್ಳು ಸುದ್ದಿಯ ಪೋಸ್ಟರ್ ವೈರಲ್ ಆಗುತ್ತಿದ್ದು , ಈ ಪೋಸ್ಟ್ ಗಳನ್ನು ಎಲ್ಲಿಂದ ಬರುತ್ತದೆ ಎಂಬುದನ್ನು ಶೀಘ್ರವಾಗಿ ಪತ್ತೆಹಚ್ಚಲಾಗುತ್ತದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೇಮಕಾತಿ ಸಂಬಂಧಿಸಿದಂತೆ ಕೇಂದ್ರ ಸರ್ಕಾರವೇ ನೇಮಕಾತಿ ಮಾಡುತ್ತದೆ. ಹೌಸ್ ಕೀಪಿಂಗ್ ಕೆಲಸಕ್ಕೆ ಮಾತ್ರ ಗುತ್ತಿಗೆ ಆಧಾರದ ಮೇಲೆ ಅಥವಾ ಏಜೆನ್ಸಿ ಮೂಲಕ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದರು. ಅದರಿಂದ ಸಾರ್ವಜನಿಕರು ಯಾವುದೇ ಕಾರಣಕ್ಕೂ ಮೋಸ ಹೋಗದಂತೆ ಪೊಲೀಸ್ ಇಲಾಖೆ ಮನವಿ ಮಾಡಿದ್ದಾರೆ.