ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ರವರ ನೇತೃತ್ವದಲ್ಲಿ ನಗರದ ಬಸ್ ಸ್ಟ್ಯಾಂಡ್ ಹತ್ತಿರ ಪ್ರತಿಭಟನೆ ನಡೆಸಿದರು.
ಶಿವಮೊಗ್ಗದ ಏರ್ಪೋರ್ಟಿನಲ್ಲಿ ಕರ್ನಾಟಕದಲ್ಲಿ ಕನ್ನಡ ಭಾಷೆಯನ್ನು ಧಿಕ್ಕರಿಸಿ ಬರೆ ಇಂಗ್ಲಿಷ್ನಲ್ಲಿ ಮತ್ತು ಹಿಂದಿಯಲ್ಲಿ ನಮೂದಿಸಿ ಕನ್ನಡವನ್ನು ಅವಮಾನಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿದರು.
ಕರ್ನಾಟಕದಲ್ಲಿ ಕನ್ನಡವೇ ಪ್ರಥಮ ಭಾಷೆ ಕನ್ನಡ ಭಾಷೆಗೆ ಆದ್ಯತೆ ಕೊಡುವುದು ನಮ್ಮೆಲ್ಲರ ಮತ್ತು ರಾಜ್ಯ ಕೇಂದ್ರ ಸರ್ಕಾರಗಳ ಜವಾಬ್ದಾರಿ ಎಂದರು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಆಮ್ ಆದ್ಮಿ ಪಾರ್ಟಿಯ ಜಿಲ್ಲಾ ಮುಖಂಡರು ಹಾಗೂ ನಗರ ಮುಖಂಡರು ಹಾಗು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.