ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಸಹ್ಯಾದ್ರಿ ವಿಜ್ಞಾನ ಕಾಲೇಜು ಮತ್ತು ರಾಷ್ಟೀಯ ಸೇವಾ ಯೋಜನೆ ಹಾಗೂ ಪರಿಸರ (ರಿ.) ಇವರ ಸಹಯೋಗದಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ನಗರದ ಸಹ್ಯಾದ್ರಿ ವಾಣಿಜ್ಯ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ “ಜಾಗತಿಕ ಯೋಗ ಕ್ಷೇಮಕ್ಕಾಗಿ ಜಾಗತಿಕ ವಿಜ್ಞಾನ” ವಿಶೇಷ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಶ್ರೀ ಡಿ.ಎಸ್. ಅರುಣ್ ಅವರೊಂದಿಗೆ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿ, ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಾಯಿತು.
ಈ ಸಂದರ್ಭದಲ್ಲಿ ಪರಿಸರ ತಜ್ಞರು, ವಿಜ್ಞಾನ ಪರಿಷತ್ ಜಿಲ್ಲಾ ಅಧ್ಯಕ್ಷರಾದ ಶ್ರೀ ಡಾ|| ನಾಗರಾಜ್ ಪರಿಸರ ಅವರು, ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರಾಜೇಶ್ವರಿ ಅವರು, ವಿಜ್ಞಾನ ಪರಿಷತ್ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಶ್ರೀ ಫ್ರಾನ್ಸಿಸ್ ಬೆಂಜಮಿನ್ ಅವರು, ಸಹ್ಯಾದ್ರಿ ವಾಣಿಜ್ಯ ಕಾಲೇಜು ಪ್ರಾಂಶುಪಾಲರಾದ ಪ್ರೊ. ವೀಣಾ ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.