ಶ್ರೀ ಕೆ ಎನ್ ಚಂದ್ರಶೇಖರ್, ASI, ಭದ್ರಾವತಿ ಸಂಚಾರ ಪೊಲೀಸ್ ಠಾಣೆ ರವರು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸುಧೀರ್ಘ ಸೇವೆಯನ್ನು ಸಲ್ಲಿಸಿ ದಿ 28ರಂದು ವಯೋ ನಿವೃತ್ತಿ ಆಗಿದ್ದಾರೆ.
ಇವರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಶ್ರೀ ಮಿಥುನ್ ಕುಮಾರ್ ಜಿ. ಕೆ. ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ನೆನಪಿನ ಕಾಣಿಕೆಯನ್ನು ನೀಡಿ ಸನ್ಮಾನಿಸಿ ಮುಂದಿನ ನಿವೃತ್ತಿ ಜೀವನವು ಸುಖಕರವಾಗಿರಲಿ ಎಂದು ಶುಭ ಕೋರಿ ಬೀಳ್ಕೊಡುಗೆ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಅನಿಲ್ ಕುಮಾರ್ ಭೂಮರೆಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆರವರು ಉಪಸ್ಥಿತರಿದ್ದರು.