ಡಿಪ್ಲೊಮಾ 1, 3 ಮತ್ತು 5ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಮುಂದಾಗಿರುವ ಕರ್ನಾಟಕ ತಾಂತ್ರಿಕ ಶಿಕ್ಷಣ ಮಂಡಳಿಯ ಕ್ರಮವನ್ನು ಜಿಲ್ಲಾ ಎನ್.ಎಸ್.ಯು.ಐ. ತೀವ್ರವಾಗಿ ಖಂಡಿಸುತ್ತಿದೆ.
ಕೋವಿಡ್ ಹಿನ್ನಲೆಯಲ್ಲಿ ಕಳೆದ ವರ್ಷ ಡಿಪ್ಲೊಮಾದ 2 ಮತ್ತು 4 ನೇ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೇ ಮುಂದಿನ ಸೆಮಿಸ್ಟರ್ ಪ್ರವೇಶಕ್ಕೆ ಅನುಮತಿ ನೀಡಲಾಗಿತ್ತು. 6ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲಾಗಿತ್ತು.
ನಂತರವೂ ಕೋವಿಡ್ ಪರಿಸ್ಥಿತಿ ಮುಂದುವರೆದಿದ್ದರಿಂದಾಗಿ ವಿದ್ಯಾರ್ಥಿಗಳು ಸಮರ್ಪಕವಾಗಿ ಅಧ್ಯಯನ ನಡೆಸಲು ಸಾಧ್ಯವಾಗಿರುವುದಿಲ್ಲ. ಇದೇ ಪರಿಸ್ಥಿತಿಯಿಂದಾಗಿ ಯುಜಿಸಿ ಬಿಇ ವಿದ್ಯಾರ್ಥಿಗಳಿಗೆ ನೀಡಿದ ಮಾರ್ಗಸೂಚಿಯಂತೆ ಈ ವರ್ಷವೂ 1, 3, 5, 7ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವಂತಿಲ್ಲ. ಆದರೆ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಮಾತ್ರ ಎಲ್ಲ ಸೆಮಿಸ್ಟರ್‍ರಗಳಲ್ಲೂ ಪರೀಕ್ಷೆ ನಡೆಸಲು ಮುಂದಾಗಿರುವುದನ್ನು ಜಿಲ್ಲಾ ಎನ್.ಎಸ್.ಯು.ಐ. ಖಂಡಿಸುತ್ತದೆ.
ಸರ್ಕಾರದ ಮಾರ್ಗಸೂಚಿಯಂತೆ ಕಾಲೇಜಿಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳೂ ಕಡ್ಡಾಯವಾಗಿ ಕೋವಿಡ್ ಲಸಿಗೆ ಪಡೆಯಲೇ ಬೇಕು. ಸರ್ಕಾರ ಈ ವರೆಗೂ ಕೇವಲ 18 ವರ್ಷದ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಮಾತ್ರ ಕೋವಿಡ್ ಲಸಿಕೆ ನೀಡುತ್ತಿದೆ. ಡಿಪ್ಲೊಮಾ ಪ್ರವೇಶ ಪಡೆದಿರುವ ಬಹುತೇಕರು ಎಸ್‍ಎಸ್‍ಎಲ್‍ಸಿ ತೇರ್ಗಡೆ ಹೊಂದಿ ಪ್ರವೇಶ ಪಡೆದಿರುತ್ತಾರೆ. 1ರಿಂದ 4ನೇ ಸೆಮಿಸ್ಟರ್ ವಿದ್ಯಾರ್ಥಿಗಳು 16-18 ವರ್ಷ ವಯಸ್ಸಿನವರಾಗಿದ್ದು, ಇವರ್ಯಾರೂ ಕೋವಿಡ್ ಲಸಿಕೆ ಪಡೆದಿರುವುದಿಲ್ಲ. ಆದರೆ, ತಾಂತ್ರಿಕ ಶಿಕ್ಷಣ ಇಲಾಖೆ ಇದನ್ನೆಲ್ಲಾ ಪರಿಗಣಿಸದೇ ಎಲ್ಲ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಮುಂದಾಗಿರುವುದು ಸರಿಯಲ್ಲ.
ಕೂಡಲೇ ಕರ್ನಾಟಕ ತಾಂತ್ರಿಕ ಶಿಕ್ಷಣ ಮಂಡಳಿಯು ಕಳೆದ ವರ್ಷದಂತೆ ಈ ವರ್ಷವೂ ಡಿಪ್ಲೊಮಾ 1, 3 ಮತ್ತು 5ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೇ ಮುಂದಿನ  ಸೆಮಿಸ್ಟರ್‍ಗೆ ತೇರ್ಗಡೆಗೊಳಿಸಬೇಕು ಎಂದು ಜಿಲ್ಲಾ ಎನ್.ಎಸ್.ಯು.ಐ. ಈ ಮೂಲಕ ಆಗ್ರಹಿಸುತ್ತಿದೆ.
ಈ ಸಂದರ್ಭದಲ್ಲಿ NSUI ನ ಬಾಲಾಜಿ, ವಿಜಯ್ ,ರವಿ,ಭರತ ,ಕಿರಣ ,ಆಲ್ವಿನ್ ,ಸಂದೇಶ, ಸಂದೀಪ ಹಾಗೂ ವಿದ್ಯಾರ್ಥಿಗಳಾದ ಆದಿತ್ಯ ,ಭರತ್, ಬ್ರಿಜೇಶ್, ಅಂಕಿತಾ, ರಾಕೇಶ್, ಸುಮಂತ್, ನಿಖಿಲ್,ಪೂಜಾ, ಮಂಜುಳಾ, ಭೂಮಿಕಾ, ಶಾಲಿನಿ, ಸಾನಾ,ವಿಶ್ವ ,ಭುವನ್ ,ಶಿವು, ರಾಜೇಶ್ ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153